ಸತ್ತೇಗಾಲ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾತಾಲೂಕಿನ ಸತ್ತೇಗಾಲ ಗ್ರಾಮದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾದಲ್ಲಿ ಗ್ರಾಮಸ್ಥರು, ಯುವಕರು ಸೇರಿದಂತೆ ನೂರಾರು ಮಂದಿ ಸಂಭ್ರಮದಿಂದ ಪಾಲ್ಗೊಂಡು ಮೆರವಣಿಗೆ ನಡೆಸಿದರು. ಸತ್ತೇಗಾಲ ಗ್ರಾಮದಲ್ಲಿ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಹಾಗೂ ಗ್ರಾಮಸ್ಥರು ಸಂವಿಧಾನ ಜಾಗೃತಿ ಸ್ಥಬ್ದಚಿತ್ರವನ್ನು ಪುಷ್ಪನಮನದೊಂದಿಗೆ ಸಲ್ಲಿಸಿ, ಬಳಿಕ ವಿವಿಧ ಕಲಾ ತಂಡಗಳು ಹಾಗೂ ಪೂರ್ಣಕುಂಭಮೇಳದೊಂದಿಗೆ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.