ಚಿಕ್ಕಲ್ಲೂರಿನ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆ ಸಂಪೂರ್ಣ ಯಶಸ್ವಿಮಾಂಸ ರಪ್ತು ನಿಷೇಧ ಹಾಗೂ ಗೋವಂಶ ಜಾನುವಾರು ಹತ್ಯೆ ನಿಷೇಧ ಕಾಯ್ದೆಯ ಜಾರಿಗೆ ಭಾರತ ಸರ್ಕಾರ ಮುಂದಾಗಬೇಕು, ಅಹಿಂಸೆ ಮತ್ತು ಆಧ್ಯಾತ್ಮ ಹಾಗೂ ಕೃಷಿ ಪ್ರಧಾನವಾದ ಭಾರತದಲ್ಲಿ ಸಂಪೂರ್ಣ ಮಾಂಸ ರಫ್ತು ನಿಷೇಧ ಕಾನೂನು ಹಾಗೂ ಸಂಪೂರ್ಣ ಗೋವಂಶ ಜಾನುವಾರು ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದು ಭಾರತವನ್ನು ಸಂಪೂರ್ಣ ಗೋವಂಶ -ಜಾನುವಾರು ಹತ್ಯೆ ಮುಕ್ತ ಮತ್ತು ಮಾಂಸ ರಫ್ತು ಮುಕ್ತ ರಾಷ್ಟ್ರ ಎಂದು ಘೋಷಿಸಬೇಕೆಂದು ಕೇಂದ್ರ ಸರ್ಕಾರವನ್ನು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಪಶು-ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಹಾಸಂಘದ ಅಧ್ಯಕ್ಷ ದಯಾನಂದಸ್ವಾಮೀಜಿ ಆಗ್ರಹಿಸಿದರು.