ಬಜೆಟ್‌ನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ 30 ರು. ಪ್ರೋತ್ಸಾಹ ಧನ ನೀಡಲು ಚಿಂತನೆಬಜೆಟ್ನಲ್ಲಿ ಪ್ರತಿ ಕೆಜಿ ರೇಷ್ಮೆಗೂಡಿಗೆ 30 ರು. ಪ್ರೋತ್ಸಾಹ ಧನ ನೀಡಲು ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದರು. ಕೊಳ್ಳೇಗಾಲ ಪಟ್ಟಣದ ಮುಡಿಗುಂಡ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿಂದು ದ್ವಿತಳಿ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೇಷ್ಮೆ ಬೆಳೆ ಉತ್ತೇಜನಕ್ಕಾಗಿ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲು ಕ್ರಮ ವಹಿಸಲಾಗುವುದು. ರೇಷ್ಮೆ ಬೆಳೆಗಾರರು, ಡೀಲರ್ ಗಳಿಗೆ ಅನುಕೂಲವಾಗುವಂತಹ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.