ದೇವಾಲಯಗಳು ವಧಾಲಯಗಳಾಗದೆ ದಿವ್ಯಾಲಯವಾಗಬೇಕು: ದಯಾನಂದಸ್ವಾಮೀಜಿಕೊಳ್ಳೇಗಾಲ ತಾಲೂಕಿನ ಶ್ರೀ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಹೊಸಮಠ ಹಳೇಮಠ, ದೇವಾಲಯದ ಮುಂಭಾಗ, ಹಿಂಭಾಗ ಸುತ್ತಮುತ್ತಲಿನ ಪರಿಸರ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ, ಹೊರವಲಯ ಮತ್ತು ಸಾರ್ವಜನಿಕ ಸ್ಥಳ, ಧಾರ್ಮಿಕ ಸಮಾವೇಶದಲ್ಲಿ ಯಾವುದೇ ಪ್ರಾಣಿಗಳ ಬಲಿ ನಡೆಯದಂತೆ ಹಾಗೂ ಪ್ರಾಣಿ ಅಂಗಾಗಗಳ ನೈವೇದ್ಯ ಸಲ್ಲಿಕೆ/ಪ್ರದರ್ಶನ ಇತ್ಯಾದಿ ಕಾನೂನು ಬಾಹಿರ ಕೃತ್ಯಗಳು ಜರುಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಪ್ರಾಣಿಬಲಿಯನ್ನು ಸಂಪೂರ್ಣವಾಗಿ ತಡೆಯಬೇಕು ಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಮತ್ತು ಪಶು ಪ್ರಾಣಿಬಲಿ ನಿರ್ಮೂಲನ ಜಾಗೃತಿ ಮಹಸಂಘ ಹಾಗೂ ಬಸವಧರ್ಮ ಜ್ಞಾನಪೀಠದ ಅಧ್ಯಕ್ಷ ದಯಾನಂದ ಸ್ವಾಮೀಜಿ ಸರ್ಕಾರ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಿದರು.