ಸಕಾರಾತ್ಮಕ ಚಿಂತನೆಗಳಿಂದ ಉತ್ತಮ ಸಮಾಜ ನಿರ್ಮಾಣಚಾಮರಾಜನಗರಪ್ರಸ್ತುತ ಜಗತ್ತು ತೀವ್ರಗತಿಯಲ್ಲಿ ಬದಲಾವಣೆಯಾಗುತ್ತಿದೆ, ಆದರೆ, ಮನುಷ್ಯನ ಒಳ ಮನಸ್ಸು ಬದಲಾವಣೆಯಾಗದೆ ಸದಾ ಒತ್ತಡದಲ್ಲಿದ್ದು, ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತಿಲ್ಲ ಎಂದು ಶಿರಸಿಯ ರಾಜಯೋಗ ಶಿಕ್ಷಣ ಕೇಂದ್ರದ ಹಿರಿಯ ರಾಜಯೋಗಿ ಶಿಕ್ಷಕಿ ಬ್ರಹ್ಮಾಕುಮಾರಿ ವೀಣಾಜೀ ತಿಳಿಸಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯ ಹಾಗೂ ಸಂಜೀವಿನಿ ಟ್ರಸ್ಟ್ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್ ಕಟ್ಟಡದಲ್ಲಿ ಆಯೋಜಿಸಿದ್ದ ಸಮಯದ ಕರೆ-ಸಕಾರಾತ್ಮಕ ಬದಲಾವಣೆ ಕುರಿತ ಕಾರ್ಯಾಗಾರದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.