ವಿಪತ್ತು ನಿರ್ವಹಣೆ ಅರಿವು ಅಗತ್ಯ ಚಾಮರಾಜನಗರಅಂಗವಿಕಲರಿಗೆ ವಿಪತ್ತು ನಿರ್ವಹಣೆ ಅರಿವು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೊಬಿಲಿಟಿ ಇಂಡಿಯಾ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲೆಯ ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರಿಗೆ ವಿಪತ್ತು ನಿರ್ವಹಣೆಯಲ್ಲಿ ವಿಕಲಚೇತನರ ಒಳಗೊಳ್ಳುವಿಕೆ ಮತ್ತು ಮನೋ ಸಾಮಾಜಿಕ ಆರೈಕೆ ಕುರಿತು ಕಾರ್ಯಾಗಾರ ಹಾಗೂ ಮತದಾನದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.