ಚಿಕ್ಕಲ್ಲೂರು ಜಾತ್ರಾ ಮಹೋತ್ಸವ ಕುರಿತು ಸಭೆ ನಡೆಸಿದ ಡೀಸಿ ಶಿಲ್ಪಾನಾಗ್ಜಿಲ್ಲೆಯ ಚಿಕ್ಕಲ್ಲೂರಿನಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಕರ್ಯವನ್ನು ಸಮರ್ಪಕವಾಗಿ ಕಲ್ಪಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಚಿಕ್ಕಲ್ಲೂರು ಜಾತ್ರಾ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಿಕ್ಕಲ್ಲೂರು ಕ್ಷೇತ್ರದಲ್ಲಿ ಜ. ೨೫ ರಿಂದ ನಡೆಯಲಿರುವ ಘನನೀಲ ಸಿದ್ದಾಪ್ಪಾಜಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆ ಸೇರಿದಂತೆ ಮೂಲ ಸೌಲಭ್ಯಗಳನ್ನು ಕೊರತೆಯಾಗದಂತೆ ಒದಗಿಸಬೇಕು. ತಾಪಂ, ಗ್ರಾಪಂ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.