ಆಕ್ಸಿಜನ್ ದುರಂತ: 15ಕ್ಕೆ ಚಾ.ನಗರ ಬಂದ್‌ಗೆ ತೀರ್ಮಾನಸಾಮಾಜಿಕ ನ್ಯಾಯದ ದೃಷ್ಟಿಯಿಂದ ಸರ್ಕಾರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ಮಾತು ಕೊಟ್ಟಂತೆ ಸರ್ಕಾರಿ ಉದ್ಯೋಗವನ್ನು ಮತ್ತು ₹25 ಲಕ್ಷ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿ ಜಿಲ್ಲೆಯ ಪ್ರಗತಿಪರ, ಕನ್ನಡಪರ, ರೈತಪರ ಹಾಗೂ ದಲಿತಪರ ಸಂಘಟನೆಗಳು ಒಗ್ಗೂಡಿ ಜು. 15ರಂದು ಚಾಮರಾಜನಗರ ಬಂದ್ ನಡೆಸಲು ತೀರ್ಮಾನಿಸಲಾಯಿತು.