ಆಕ್ಸಿಜನ್ ದುರಂತ: ನ್ಯಾಯಕ್ಕಾಗಿ ಸಂಘಟನೆಗಳ ಪ್ರತಿಭಟನೆಸಾಮಾಜಿಕ ನ್ಯಾಯದ ದೃಷ್ಟಿಯಿಂದ ಸರ್ಕಾರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೂ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಮಾತುಕೊಟ್ಟಂತೆ ಸರ್ಕಾರಿ ಉದ್ಯೋಗ, 25 ಲಕ್ಷ ರು.ಪರಿಹಾರ ನೀಡಬೇಕೆಂದು ಒತ್ತಾಯಿಸಿ ಜಿಲ್ಲೆಯ ಪ್ರಗತಿಪರ, ಕನ್ನಡಪರ, ರೈತಪರ ಹಾಗೂ ದಲಿತಪರ ಸಂಘಟನೆಗಳು ಒಗ್ಗೂಡಿ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಿದರು.