ಗಡಿಜಿಲ್ಲೆ ಚಾ.ನಗರದ ಅಭಿವೃದ್ಧಿ ಬಾಗಿಲು ತೆರೆಯುವುದೇ?ಆಡಳಿತ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೇ ಕೇಂದ್ರಿಕೃತವಾಗಿರಬಾರದು, ರಾಜ್ಯದ ಗಡಿ ಮತ್ತು ಕಾಡಂಚಿನ ಪ್ರದೇಶಕ್ಕೂ ತಲುಪಬೇಕು ಎಂಬ ಮಹತ್ವಾಕಾಂಕ್ಷೆಯಿಂದ ರಾಜ್ಯದ ಗಡಿ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ೧೨ ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ.