ಘಾಟಿ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ

| Published : Dec 19 2023, 01:45 AM IST

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ದ ಯಾತ್ರಾಸ್ಥಳವಾಗಿರುವ ಘಾಟಿ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಸೋಮವಾರ ಚಂಪಾ ಷಷ್ಠಿ ಮಹೋತ್ಸವ ನೆರವೇರಿತು. ಶ್ರೀಸ್ವಾಮಿಗೆ ವಿಶೇಷಾಲಂಕಾರ ಮಾಡಲಾಗಿತ್ತು. ನಸುಕಿನ ಜಾವದಿಂದಲೇ ವಿವಿಧ ಪೂಜಾ ಹಾಗೂ ಧಾರ್ಮಿಕ ಕಾರ್‍ಯಕ್ರಮಗಳು ನಡೆದವು.

ದೊಡ್ಡಬಳ್ಳಾಪುರ: ತಾಲೂಕಿನ ಸುಪ್ರಸಿದ್ದ ಯಾತ್ರಾಸ್ಥಳವಾಗಿರುವ ಘಾಟಿ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಸೋಮವಾರ ಚಂಪಾ ಷಷ್ಠಿ ಮಹೋತ್ಸವ ನೆರವೇರಿತು. ಶ್ರೀಸ್ವಾಮಿಗೆ ವಿಶೇಷಾಲಂಕಾರ ಮಾಡಲಾಗಿತ್ತು. ನಸುಕಿನ ಜಾವದಿಂದಲೇ ವಿವಿಧ ಪೂಜಾ ಹಾಗೂ ಧಾರ್ಮಿಕ ಕಾರ್‍ಯಕ್ರಮಗಳು ನಡೆದವು.

ದೇವಾಲಯ ಪ್ರಾಂಗಣದಲ್ಲಿ ವಿಶೇಷ ಹೋಮದ ಬಳಿಕ ಲೋಕಕಲ್ಯಾಣಾರ್ಥ ಸುಬ್ರಹ್ಮಣ್ಯ ಸ್ವಾಮಿಗೆ ಅರಿಶಿಣ, ಕುಂಕುಮ, ಎಳನೀರು, ಶ್ರೀಗಂಧ, ಹಾಲು, ಮೊಸರು, ತುಪ್ಪ ಸೇರಿದಂತೆ ವಿವಿಧ ದ್ರವ್ಯಗಳ ಮಹಾಭಿಷೇಕ ನಡೆಯಿತು.

ನಾಗಾರಾಧನೆಗೆ ಪ್ರಸಿದ್ಧವಾಗಿರುವ ಘಾಟಿ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಅಂಗವಾಗಿ ಬೆಳಿಗ್ಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು. ಭಕ್ತರು ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿದರು.

ಸಾಮಾನ್ಯವಾಗಿ ಚಂಪಾಷಷ್ಠಿಯಂದು ಸುಬ್ರಹ್ಮಣ್ಯ ದೇಗುಲಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಅಶ್ವತ್ಥಕಟ್ಟೆಯಲ್ಲಿ ಸರ್ಪಾಕಾರದ ವಿಗ್ರಹವನ್ನಿಟ್ಟು ಸುಬ್ರಹ್ಮಣ್ಯ ಸ್ವಾಮಿಯನ್ನು ಆವಾಹನೆ ಮಾಡಿ ಹಾಲೆರೆದು ಅಭಿಷೇಕ ಮಾಡಿ ನೈವೇದ್ಯ ಅರ್ಪಿಸಿ ಅಂದು ಉಪವಾಸ ವ್ರತ ಆಚರಿಸುವ ಪದ್ಧತಿಯಿದೆ.

ಕುಕ್ಕೆಗೆ ತೆರಳಲು ಸಾಧ್ಯವಾಗದ ಭಕ್ತಾದಿಗಳು ಘಾಟಿ ಕ್ಷೇತ್ರದಲ್ಲಿಯೇ ನಾಗಾರಾಧನೆ ಮಾಡಿ ತಮ್ಮ ಇಷ್ಟಾರ್ಥ ನೆರವೇರಿಸುವಂತೆ ದೇವರಲ್ಲಿ ಪ್ರಾರ್ಥಿಸುತ್ತಾರೆ. ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿ ಸ್ವಾಮಿ ದರ್ಶನ ಪಡೆಯುತ್ತಾರೆ.

ಘಾಟಿಯಲ್ಲಿ ಜ.16ಕ್ಕೆ ರಥೋತ್ಸವ:

ಈ ಬಾರಿ ಜನವರಿ 16 ರಂದು ಘಾಟಿ ಸುಬ್ರಹ್ಮಣ್ಯದಲ್ಲಿ ಮಹಾ ರಥೋತ್ಸವ ನಡೆಯಲಿದೆ. ಇದಕ್ಕೂ ಮುನ್ನ ರಾಜ್ಯದಲ್ಲೇ ಪ್ರಖ್ಯಾತಿ ಪಡೆದಿರುವ ದನಗಳ ಜಾತ್ರೆ ಆಯೋಜನೆಗೊಳ್ಳಲಿದೆ. ಇದಕ್ಕಾಗಿ ಕ್ಷೇತ್ರದಲ್ಲಿ ಇಂದಿನಿಂದಲೇ ಅಧಿಕೃತ ಸಿದ್ದತಾ ಕಾರ್‍ಯಗಳು ಆರಂಭಗೊಂಡವು.18ಕೆಡಿಬಿಪಿ4-

ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ಸ್ವಾಮಿಗೆ ಚಂಪಾಷಷ್ಠಿ ಅಂಗವಾಗಿ ವಿಶೇಷಾಲಂಕಾರ.18ಕೆಡಿಬಿಪಿ5- ಚಂಪಾ ಷಷ್ಠಿ ಅಂಗವಾಗಿ ಘಾಟಿ ಕ್ಷೇತ್ರದಲ್ಲಿ ಹುತ್ತಗಳಿಗೆ ಭಕ್ತಾದಿಗಳಿಂದ ವಿಶೇಷ ಪೂಜೆ.