ಕಿಲ್ಪಾಡಿ ಶ್ರೀ ಕುಮಾರಮಂಗಲ ಸುಬ್ರಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ

| Published : Dec 08 2024, 01:16 AM IST

ಕಿಲ್ಪಾಡಿ ಶ್ರೀ ಕುಮಾರಮಂಗಲ ಸುಬ್ರಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ
Share this Article
  • FB
  • TW
  • Linkdin
  • Email

ಸಾರಾಂಶ

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ಪ್ರಾತಃಕಾಲ ವಿಶೇಷ ಪ್ರಾರ್ಥನೆ, ಗಣ ಹೋಮ, ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, 11 ಗಂಟೆಗೆ ಮಹಾಪೂಜೆ, ಶ್ರೀ ದೇವರ ಬಲಿ ಉತ್ಸವ, ಮಹಾ ಅನ್ನಸಂತರ್ಪಣೆ ನಡೆಯಿತು.

ಮೂಲ್ಕಿ: ಕಿಲ್ಪಾಡಿ ಶ್ರೀ ಕುಮಾರಮಂಗಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶನಿವಾರ ಚಂಪಾಷಷ್ಠಿ ಮಹೋತ್ಸವ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ಪ್ರಾತಃಕಾಲ ವಿಶೇಷ ಪ್ರಾರ್ಥನೆ, ಗಣ ಹೋಮ, ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, 11 ಗಂಟೆಗೆ ಮಹಾಪೂಜೆ, ಶ್ರೀ ದೇವರ ಬಲಿ ಉತ್ಸವ, ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಮಹಾಪೂಜೆ ಹಾಗೂ ಶ್ರೀ ಕುಮಾರಸ್ವಾಮಿ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಶಿಬರೂರು ಕೃಷ್ಣರಾಜ ತಂತ್ರಿ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಚಂದ್ರಶೇಖರ ಮಯ್ಯ, ಡಾ. ಶ್ರೀವತ್ಸ ಉಪಾಧ್ಯಾಯ, ಲಕ್ಷ್ಮೀಕಾಂತ ರಾವ್‌, ಕುಮಾರಸ್ವಾಮಿ ಯುವಕ ಮಂಡಲದ ಗೌರವಾಧ್ಯಕ್ಷ ಗೋಪಿನಾಥ ಪಡಂಗ, ಅಧ್ಯಕ್ಷ ಸತೀಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.