ಸಾರಾಂಶ
ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ವಾಜಪೇಯಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ ಪಾಲ್ಗೊಂಡಿದ್ದರು. ಈ ವೇಳೆ ಶ್ರೀ ಚಾಮುಂಡೇಶ್ವರಿ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು
ಕನ್ನಡಪ್ರಭ ವಾರ್ತೆ ಮೈಸೂರುಜಿಲ್ಲಾ ಬ್ರಾಹ್ಮಣ ಮಹಾಸಭಾವು ಶ್ರೀ ಚಾಮುಂಡೇಶ್ವರಿ ದೇವಿಯ ವರ್ಧಂತಿ ಹಾಗೂ ಸಮಾಜ ಸೇವಕ ಬಿ.ಆರ್. ನಟರಾಜ ಜೋಯಿಸ್ ಅವರ ಜನ್ಮ ದಿನಾಚರಣೆಯನ್ನು ದೇವಯ್ಯನಹುಂಡಿಯ ಶಾಕಂಬರಿ ಧಾರ್ಮಿಕ ಶ್ರದ್ಧಾಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ವಾಜಪೇಯಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ ಪಾಲ್ಗೊಂಡಿದ್ದರು. ಈ ವೇಳೆ ಶ್ರೀ ಚಾಮುಂಡೇಶ್ವರಿ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು.ಬಿ.ಆರ್. ನಟರಾಜ ಜೋಯಿಸ್ ದಂಪತಿಯನ್ನು ಇದೇ ವೇಳೆ ಸನ್ಮಾನಿಸಲಾಯಿತು. ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಹಿರಿಯ ಸಾಹಿತಿ ಡಾ. ಸಿಪಿಕೆ, ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮಾಜಿ ಅಧ್ಯಕ್ಷರಾದ ಡಾ.ವೈ.ಡಿ. ರಾಜಣ್ಣ, ಎಂ. ಚಂದ್ರಶೇಖರ್, ಡಾ.ಎಂ.ಜಿ.ಆರ್. ಅರಸ್, ರತ್ನಾ ಹಾಲಪ್ಪಗೌಡ, ಕನ್ನಡ ಹೋರಾಟಗಾರಾದ ಮೂಗೂರು ನಂಜುಂಡಸ್ವಾಮಿ, ಬಾಲಕೃಷ್ಣ, ಲತಾ ಮೋಹನ್ ಮೊದಲಾದವರು ಪಾಲ್ಗೊಂಡಿದ್ದರು.