ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ

| N/A | Published : Aug 27 2025, 01:00 AM IST / Updated: Aug 27 2025, 04:30 AM IST

Dk Shivakumar
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Share this Article
  • FB
  • TW
  • Linkdin
  • Email

ಸಾರಾಂಶ

ದಸರಾ ಧಾರ್ಮಿಕ ಆಚರಣೆ ಅಲ್ಲ, ಅದೊಂದು ಸಾಂಸ್ಕೃತಿಕ ಆಚರಣೆ. ಎಲ್ಲಾ ಧರ್ಮದವರೂ ಅದರಲ್ಲಿ ಪಾಲ್ಗೊಳ್ಳುತ್ತಾರೆ. ಅಲ್ಲದೆ, ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲ ಧರ್ಮದವರಿಗೂ ಅಲ್ಲಿ ಪ್ರವೇಶವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

  ಬೆಂಗಳೂರು :  ದಸರಾ ಧಾರ್ಮಿಕ ಆಚರಣೆ ಅಲ್ಲ, ಅದೊಂದು ಸಾಂಸ್ಕೃತಿಕ ಆಚರಣೆ. ಎಲ್ಲಾ ಧರ್ಮದವರೂ ಅದರಲ್ಲಿ ಪಾಲ್ಗೊಳ್ಳುತ್ತಾರೆ. ಅಲ್ಲದೆ, ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲ ಧರ್ಮದವರಿಗೂ ಅಲ್ಲಿ ಪ್ರವೇಶವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಮಂಗಳ‍ವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿಯ ದಸರಾ ಉದ್ಘಾಟನೆಗೆ ಬುಕರ್‌ ಪ್ರಶಸ್ತಿ ಪುರಸ್ಕೃತ ಕನ್ನಡದ ಲೇಖಕಿ ಬಾನು ಮುಷ್ತಾಕ್‌ರನ್ನು ಆಹ್ವಾನಿಸಿರುವ ಸರ್ಕಾರದ ಕ್ರಮ ವಿರೋಧಿಸುತ್ತಿರುವ ಬಿಜೆಪಿಯವರ ನಡೆ ಕೇವಲ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.

ದಸರಾ ಧಾರ್ಮಿಕ ಅಲ್ಲ, ಸಾಂಸ್ಕೃತಿಕ ಆಚರಣೆಯಾಗಿದ್ದು ಎಲ್ಲಾ ಧರ್ಮದವರೂ ಪಾಲ್ಗೊಳ್ಳುತ್ತಾರೆ. ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲ ಸಮಾಜದವರೂ ಹೋಗಿ ತಮ್ಮ ಪ್ರಾರ್ಥನೆ ಮಾಡುತ್ತಾರೆ. ಅದು ಅವರವರ ನಂಬಿಕೆಗೆ ಬಿಟ್ಟಿದ್ದು ಎಂದರು.

ನಾವು ಕೂಡ (ಹಿಂದೂಗಳು) ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತೇವೆ. ಇದನ್ನು ಯಾರಾದರೂ ತಪ್ಪಿಸಿದ್ದಾರಾ? ಹಿಂದೂ ದೇವಸ್ಥಾನಗಳಿಗೆ ಅವರು(ಬೇರೆ ಧರ್ಮೀಯರು) ಬರುವುದನ್ನು ನಾವು ವಿರೋಧಿಸಿದ್ದೇವೆಯೇ? ಯಾವುದೇ ಶ್ರದ್ದಾ ಕೇಂದ್ರಗಳಿಗೆ ಯಾರು ಬೇಕಾದರೂ ಹೋಗಿ ಬರಬಹುದು ಎಂದು ಹೇಳಿದರು.

ಎಲ್ಲರಿಗೂ ಅವಕಾಶವಿದೆ:

ನಮ್ಮದು ಜಾತ್ಯತೀತ ರಾಷ್ಟ್ರ. ನಮ್ಮ ಸಂವಿಧಾನದ ಮೂಲಕ ಎಲ್ಲರಿಗೂ ಅವಕಾಶ, ಸ್ವಾತಂತ್ರ್ಯ ಕಲ್ಪಿಸಲಾಗಿದೆ.‌ ಎಲ್ಲರಿಗೂ ಸಂವಿಧಾನದ ರಕ್ಷಣೆಯಿದೆ. ಎಲ್ಲರಿಗೂ ಅವರವರ ನಂಬಿಕೆ ಮೇಲೆ ವಿಶ್ವಾಸವಿದೆ. ಮುಸ್ಲಿಂ ಅಥವಾ ಕ್ರಿಶ್ಚಿಯನ್ ಹೆಣ್ಣು, ಹಿಂದು ಅಥವಾ ಇತರೆ ಧರ್ಮದ ಗಂಡಿಗೆ ಜನಿಸಿದ ಮಕ್ಕಳು ತಮಗೆ ಬೇಕಾದದ್ದನ್ನು ಅನುಸರಿಸುತ್ತಾರೆ ಎಂದರು.ದಸರಾ ಹಬ್ಬವನ್ನು ಅನ್ಯಧರ್ಮೀಯರು ಉದ್ಘಾಟಿಸುತ್ತಿರುವುದು ಇದೇ ಮೊದಲಲ್ಲ. 2017ರಲ್ಲಿ ನಿತ್ಯೋತ್ಸವ ಕವಿ ಕೆ.ಎಸ್‌.ನಿಸ್ಸಾರ್‌ ಅಹಮದ್‌ ಅವರೂ ಹಿಂದೆ ಉದ್ಘಾಟಿಸಿದ್ದರು. ಆದರೂ ಈಗ ಯಾಕೆ ವಿರೋಧ? ಕೇವಲ ರಾಜಕೀಯಕ್ಕಾಗಿ ಬಿಜೆಪಿಯವರು ವಿರೋಧ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ದಸರಾ ಉದ್ಘಾಟನೆಗೆ

ಈಗ ವಿರೋಧ ಏಕೆ?

ದಸರಾ ಹಬ್ಬವನ್ನು ಅನ್ಯಧರ್ಮೀಯರು ಉದ್ಘಾಟಿಸುತ್ತಿರುವುದು ಇದೇ ಮೊದಲಲ್ಲ. 2017ರಲ್ಲಿ ನಿತ್ಯೋತ್ಸವ ಕವಿ ಕೆ.ಎಸ್‌.ನಿಸ್ಸಾರ್‌ ಅಹಮದ್‌ ಅವರೂ ಹಿಂದೆ ಉದ್ಘಾಟಿಸಿದ್ದರು. ಆದರೂ ಈಗ ಯಾಕೆ ವಿರೋಧ?

- ಡಿ.ಕೆ. ಶಿವಕುಮಾರ್‌, ಡಿಸಿಎಂ

Read more Articles on