ಚಿಕ್ಕಬ್ಯಾಡರಹಳ್ಳಿ ಹಿರಿಯ ವಿದ್ಯಾರ್ಥಿಗಳ ಸಂಘಕ್ಕೆ ಅಧ್ಯಕ್ಷರಾಗಿ ಚಂದನ್ ಆಯ್ಕೆ

| Published : Apr 01 2024, 12:48 AM IST

ಚಿಕ್ಕಬ್ಯಾಡರಹಳ್ಳಿ ಹಿರಿಯ ವಿದ್ಯಾರ್ಥಿಗಳ ಸಂಘಕ್ಕೆ ಅಧ್ಯಕ್ಷರಾಗಿ ಚಂದನ್ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಹಿರಿಯ ವಿದ್ಯಾರ್ಥಿಗಳ ಸಂಘ ರಚಿಸಲು ರಾಜ್ಯ ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ಭಾನುವಾರ ಶಾಲೆ ಎಸ್‌ಡಿಎಂಸಿ ಹಾಗೂ ಮುಖ್ಯಶಿಕ್ಷಕರ ಸಮ್ಮುಖದಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ ನಡೆಸಿ ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಸರ್ಕಾರಿ ಪ್ರೌಢಶಾಲೆ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಸಿ.ಎನ್. ಚಂದನ್ ಆಯ್ಕೆಯಾದರು.

ಪ್ರತಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಹಿರಿಯ ವಿದ್ಯಾರ್ಥಿಗಳ ಸಂಘ ರಚಿಸಲು ರಾಜ್ಯ ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ಭಾನುವಾರ ಶಾಲೆ ಎಸ್‌ಡಿಎಂಸಿ ಹಾಗೂ ಮುಖ್ಯಶಿಕ್ಷಕರ ಸಮ್ಮುಖದಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ ನಡೆಸಿ ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಂಘದ ಅಧ್ಯಕ್ಷರಾಗಿ ಸಿ.ಎನ್. ಚಂದನ್, ಗೌರವಾಧ್ಯಕ್ಷರಾಗಿ ಸಾಹಿತಿ, ನಾರಾಯಣ ತಿರುಮಲಾಪುರ, ಪ್ರಧಾನ ಕಾರ್‍ಯದರ್ಶಿಯಾಗಿ ಎಚ್.ಆರ್.ಪ್ರದೀಪ್, ಉಪಾಧ್ಯಕ್ಷರಾಗಿ- ಚೈತ್ರ, ಕೃಷ್ಣಮೂರ್ತಿ, ಆನಂದ್, ಖಜಾಂಚಿ- ಶಿವಲಿಂಗು, ಸಹ ಕಾರ್‍ಯದರ್ಶಿಯಾಗಿ- ಪಾರ್ಥ, ಲಿಂಗರಾಜು, ಯೋಗೇಶ್(ಗಜ), ಸಂಘಟನಾ ಕಾರ್‍ಯದರ್ಶಿಯಾಗಿ ಅನಿಲ್, ಪಾಂಡಿದೊರೆ, ಬಾಬು, ಪತ್ರಿಕಾ ಕಾರ್‍ಯದರ್ಶಿ-ಚನ್ನಮಾದೇಗೌಡ, ಕಾನೂನು ಸಲಹೆಗಾರ- ಕಾಳೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷ ನಾರಾಯಣ್‌ ತಿರುಮಲಾಪುರ ಮಾತನಾಡಿ, ಸಂಘಗಳು ಶಾಲೆಗಳ ಅಭಿವೃದ್ದಿಗೆ ಪೂರಕವಾಗಿ ಕೆಲಸ ಮಾಡಬೇಕು. ಖಾಸಗಿ ಶಾಲೆಗಳ ಹಾವಳಿ ಹೆಚ್ಚಾಗಿ ಸರಕಾರಿ ಶಾಲೆಗಳಿಗೆ ದಾಖಲಾತಿ ಕಡಿಮೆಯಾಗಿ ಮುಚ್ಚುವ ಹಂತಕ್ಕೆ ಬಂದು ತಲುಪಿವೆ. ನಾವೆಲ್ಲರು ಮಕ್ಕಳ ದಾಖಲಾತಿ ಹೆಚ್ಚಿಸುವುದರ ಜತೆಗೆ ಶಾಲೆ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಅಧ್ಯಕ್ಷ ಸಿ.ಎನ್. ಚಂದನ್ ಮಾತನಾಡಿ, ಶಾಲೆ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಸೇರಿ ನನ್ನನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಾರೆ. ಇಲ್ಲಿ ಎಲ್ಲರು ಸಮಾನವರು. ಇನ್ನೂ ಸಾಕಷ್ಟು ಹಿರಿಯ ವಿದ್ಯಾರ್ಥಿಗಳು ಬರಬೇಕಾಗಿದೆ. ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ಓದಿದ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಶಾಲೆಯ ಅಭಿವೃದ್ದಿಗೆ ಪೂರಕವಾಗಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಶಾಖೆ ಮುಖ್ಯಶಿಕ್ಷಕ ಬಾಲಕೃಷ್ಣ ಸೇರಿದಂತೆ ಎಸ್‌ಡಿಎಂಎಸಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಹಲವು ಹಿರಿಯ ವಿದ್ಯಾರ್ಥಿಗಳು ಹಾಜರಿದ್ದರು.