ಸಾರಾಂಶ
ಹಿರಿಯಣ್ಣನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಚಂದ್ರಕಲಾರವರನ್ನು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಗುಮ್ಮಟ ನಗರಿ ವಿಜಯಪುರ ಜಿಲ್ಲಾ ಘಟಕವು ‘ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ’ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ । ಹಿರಿಯಣ್ಣನಹಳ್ಳಿಯ ಪ್ರಾಥಮಿಕ ಶಾಲಾ ಶಿಕ್ಷಕಿ
ಚಿಕ್ಕಬಳ್ಳಾಪುರ: ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದು ನಾಡಿಗೆ ಕೊಡುಗೆ ನೀಡಿರುವ ತಾಲೂಕಿನ ಹಿರಿಯಣ್ಣನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಚಂದ್ರಕಲಾರವರನ್ನು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಗುಮ್ಮಟ ನಗರಿ ವಿಜಯಪುರ ಜಿಲ್ಲಾ ಘಟಕವು ‘ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ’ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಗುಮ್ಮಟ ನಗರಿ ವಿಜಯಪುರ ಜಿಲ್ಲಾ ಘಟಕ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು ನಾಡಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರನ್ನು ಗುರುತಿಸಿ ನೀಡಲಾಗುವ ಈ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಹಿರಿಯಣ್ಣನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಚಂದ್ರಕಲಾ ಅವರಿಗೆ ಪ್ರದಾನ ಮಾಡಲು ತೀರ್ಮಾನಿಸಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಶಸ್ತಿಗೆ ಭಾಜನರಾದ ಸಹ ಶಿಕ್ಷಕಿ ಚಂದ್ರಕಲಾ ಅವರಿಗೆ ನೀಡಿರುವ ಪತ್ರದಲ್ಲಿ, ಜನವರಿ 21ರಂದು ಗುಮ್ಮಟ ನಗರಿ ವಿಜಯಪುರದ ತೊರವಿಯಲ್ಲಿನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮ್ಮೇಳನ ಹಾಗೂ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಜಿ ಎಸ್ ಕಾಂಬಳೆ ಹಾಗೂ ಕಾರ್ಯದರ್ಶಿ ರಮೇಶ ಎಸ್. ನಾಯಕ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.---------
ಸಾವಿತ್ರಿಬಾಯಿ ಫುಲೆ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕಿ ಚಂದ್ರಕಲಾ.