ಚಂದ್ರಶೇಖರನ್‌ ಸಾವಿಗೆ ನ್ಯಾಯ ಸಿಗಲಿದೆ: ಸಚಿವ ಮಧು

| Published : May 30 2024, 12:51 AM IST

ಚಂದ್ರಶೇಖರನ್‌ ಸಾವಿಗೆ ನ್ಯಾಯ ಸಿಗಲಿದೆ: ಸಚಿವ ಮಧು
Share this Article
  • FB
  • TW
  • Linkdin
  • Email

ಸಾರಾಂಶ

ಈ ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ಈ ರೀತಿ ಆಗಕೂಡದು. ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವುದು ಜಿಲ್ಲಾ ಉಸ್ತುವಾರಿ ಸಚಿವನಾದ ನನ್ನ ಜವಾಬ್ದಾರಿ. ಮೃತರ ಕುಟುಂಬ ಸದಸ್ಯರ ಮುಖ್ಯಮಂತ್ರಿ ಸಿದ್ದರಾಮಯ್ಯರ ವೈಯಕ್ತಿಕವಾಗಿ ಭೇಟಿ ಮಾಡಿಸುವೆ. ಮೃತರ ಕುಟುಂಬದ ದುಃಖ ಭರಿಸಲು ಖಂಡಿತ ಸಾಧ್ಯವಿಲ್ಲ. ಆದರೆ, ಸರ್ಕಾರದ ಹಂತದಲ್ಲಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಿವಮೊಗ್ಗದ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರನ್‌ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ದಿ.ಚಂದ್ರಶೇಖರನ್‌ ಪತ್ನಿಗೆ ಸಾಂತ್ವನ ಹೇಳಿದ ಮಧು ಬಂಗಾರಪ್ಪ ಚಂದ್ರಶೇಖರನ್‌ ಸಾವಿಗೆ ಸರ್ಕಾರದಿಂದ ಖಂಡಿತ ನ್ಯಾಯ ಒದಗಿಸಲಾಗುವುದು. ಅದೇ ರೀತಿ, ಮೃತರ ಕುಟುಂಬಕ್ಕೆ ವೈಯಕ್ತಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಈ ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ಈ ರೀತಿ ಆಗಕೂಡದು. ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವುದು ಜಿಲ್ಲಾ ಉಸ್ತುವಾರಿ ಸಚಿವನಾದ ನನ್ನ ಜವಾಬ್ದಾರಿ. ಮೃತರ ಕುಟುಂಬ ಸದಸ್ಯರ ಮುಖ್ಯಮಂತ್ರಿ ಸಿದ್ದರಾಮಯ್ಯರ ವೈಯಕ್ತಿಕವಾಗಿ ಭೇಟಿ ಮಾಡಿಸುವೆ. ಮೃತರ ಕುಟುಂಬದ ದುಃಖ ಭರಿಸಲು ಖಂಡಿತ ಸಾಧ್ಯವಿಲ್ಲ. ಆದರೆ, ಸರ್ಕಾರದ ಹಂತದಲ್ಲಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಮಕ್ಕಳ ವಿದ್ಯಾಭ್ಯಾಸಕ್ಕೆ ವೈಯಕ್ತಿಕ ನೆರವು:

ಮೃತ ಚಂದ್ರಶೇಖರನ್‌ ಮಕ್ಕಳ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ವೈಯಕ್ತಿಕ ನೆರವು ನೀಡಲಾಗುವುದು. ಮಕ್ಕಳ ಭವಿಷ್ಯಕ್ಕೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಕುರಿತ ನಾನು ಚರ್ಚಿಸುವುದಿಲ್ಲ. ಘಟನೆ ಕುರಿತ, ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಕಾನೂನಿನ ಅಡಿಯಲ್ಲಿ ಖಂಡಿತ ಶಿಕ್ಷೆ ಆಗಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಪ್ರಮುಖರಾದ ಕಲಗೋಡು ರತ್ನಾಕರ್, ಜಿ.ಡಿ. ಮಂಜುನಾಥ, ಸಂತೇಕಡೂರು ವಿಜಯ್ ಮತ್ತಿತರರಿದ್ದರು.