ಜಿಲ್ಲಾ ಕೃಷಿಕ ಸಮಾಜದ 2026-27 ರಿಂದ 2029-30 ನೇ ಸಾಲಿನ ಅವಧಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಚಂದ್ರಶೇಖರ ಪಾಟೀಲ್ ಗೂಗೇಬಾಳ ಅವರನ್ನು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ರಾಯಚೂರು

ಜಿಲ್ಲಾ ಕೃಷಿಕ ಸಮಾಜದ 2026-27 ರಿಂದ 2029-30 ನೇ ಸಾಲಿನ ಅವಧಿಗೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಚಂದ್ರಶೇಖರ ಪಾಟೀಲ್ ಗೂಗೇಬಾಳ ಅವರನ್ನು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸ್ಥಳೀಯ ಜಂಟಿ ಕೃಷಿ ನಿರ್ದೇಶಕರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹೊಸ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ಇದೇ ವೇಳೆ ಕೃಷಿಕರ ಸಮಸ್ಯೆಗಳಿಗೆ ಸ್ಪಂದಿಸುವುದು, ರೈತರ ಹಿತಾಸಕ್ತಿಗಳನ್ನು ರಕ್ಷಿಸುವುದು ಹಾಗೂ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ವಿಷಯಗಳ ಕುರಿತು ಚರ್ಚಿಸಲಾಯಿತು. ಅಷ್ಟೇ ಅಲ್ಲದೇ, ಕೃಷಿ ಸಮಾಜದ ಸಂಘಟನೆ ಮತ್ತಷ್ಟು ಬಲಪಡಿಸುವುದು, ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಪೂರಕ ಕಾರ್ಯಚಟುವಟಿಕೆಗಳಿಗೆ ಆದ್ಯತೆ ನೀಡುವುದರ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಕೃಷಿ ಸಮಾಜದ ರಾಜ್ಯ ಪ್ರತಿನಿಧಿಗಳು, ಮಾಜಿ ಪದಾಧಿಕಾರಿಗಳು ಹಾಗೂ ವಿವಿಧ ಹಂತದ ಮುಖಂಡರು ಭಾಗವಹಿಸಿ ಕೃಷಿಕರ ಸಮಸ್ಯೆಗಳು ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದರು.

ಕೃಷಿ ಸಮಾಜದ ರಾಜ್ಯ ಪ್ರತಿನಿಧಿ ವಿಜಯಕುಮಾರ ಪಾಟೀಲ್ ಶಾವಂತಿಗೇರ, ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ ಗುಗೇಬಾಳ, ರಾಜ್ಯದ ಮಾಜಿ ಪ್ರತಿನಿಧಿ ಎಸ್.ಎಂ.ಸಿದ್ದಾರೆಡ್ಡಿ, ಮಾಜಿ ಜಿಲ್ಲಾಧ್ಯಕ್ಷ ಸುರೇಂದ್ರ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಮಲ್ಲಟ್, ಕೋಶಾಧ್ಯಕ್ಷ ಉಮೇಶ್ ಮತ್ತೂರು ಹಾಗೂ ತಾಲೂಕು ಅಧ್ಯಕ್ಷ ಈಶಪ್ಪ ದೇಸಾಯಿ, ಶಿವಪ್ಪ ಗೌಡ ಕಲ್ಲೂರು, ಬಸವರಾಜ ಗೌರಂಪೇಟೆ, ಬಸವರಾಜ ಗಾಣದಾಳ, ಮಲ್ಲಿಕಾರ್ಜುನ ಸಂಕೇಶ್ರಾಳ, ಹೊನ್ನನಗೌಡ ಸಿಂಧನೂರು, ಮಹಾಬಲೇಶ ಗೌಡ ಮಾನ್ವಿ ಹಾಗೂ ಮಂಜುನಾಥ ಪಾಟೀಲ ವಟಗಲ್ ಸಹಿತ ಜಂಟಿ ಕೃಷಿ ನಿರ್ದೇಶಕರು ಹಾಗೂ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.