ಸಾರಾಂಶ
ಬೆಂಗಳೂರು : ಲೋಕಸಭಾ ಚುನಾವಣೆ-2024ರ ಸಂಬಂಧ ಜೂನ್ 4ರಂದು ನಗರದಲ್ಲಿ ಮೂರು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಮತ ಎಣಿಕೆ ಕೇಂದ್ರಗಳ ಬಳಿ ಸಾವಿರಾರು ಸಂಖ್ಯೆಯಲ್ಲಿ ಜನ ಜಮಾಯಿಸುವ ನಿರೀಕ್ಷೆ ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ಅಂದು ಮತ ಎಣಿಕೆ ಕೇಂದ್ರಗಳ ಸುತ್ತಮುತ್ತಲ ರಸ್ತೆಗಳಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಕೆಲ ತಾತ್ಕಾಲಿಕ ಮಾರ್ಪಾಡುಗಳನ್ನು ಮಾಡಿದ್ದಾರೆ.
ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಮತ ಎಣಿಕೆ ಮುಗಿಯುವವರೆಗೂ ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್‌ನಿಂದ ಮಿನುಗುತಾರೆ ಕಲ್ಪನಾ ಜಂಕ್ಷನ್ ವರೆಗೂ ಮತ್ತು ಮಿನುಗುತಾರೆ ಕಲ್ಪನಾ ಜಂಕ್ಷನ್‌ನಿಂದ ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್ ವರೆಗೆ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.
ಪರ್ಯಾಯ ಮಾರ್ಗಗಳು:
ಪ್ಯಾಲೇಸ್ ರಸ್ತೆಯಿಂದ ಎಂಸಿಸಿ ಕಾಲೇಜು, ಕಲ್ಪನಾ ಜಂಕ್ಷನ್ ಮತ್ತು ಚಂದ್ರಿಕಾ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು- ಪ್ಯಾಲೇಸ್ ರಸ್ತೆಯಲ್ಲಿ ಎಡ ತಿರುವು ಪಡೆದು ಚಕ್ರವರ್ತಿ ಲೇಔಟ್ ಮುಖಾಂತರ ವಸಂತನಗರ ಕೆಳಸೇತುವೆ ಬಳಿ ಎಡ ತಿರುವು ಪಡೆದು ಕಂಟೋನ್ಮಂಟ್ ರಸ್ತೆಯ ಮೂಲಕ ಮುಂದಕ್ಕೆ ಸಂಚರಿಸಬಹುದು.
ಬಸವೇಶ್ವರ ಜಂಕ್ಷನ್ ಕಡೆಯಿಂದ ಉದಯ ಟಿವಿ ಜಂಕ್ಷನ್ ಮತ್ತು ಜಯಮಹಲ್ ರಸ್ತೆಯ ಕಡೆಗೆ ಸಂಚರಿಸಲು- ಬಸವೇಶ್ವರ ಜಂಕ್ಷನ್, ಓಲ್ಡ್ ಹೈಗೌಂಡ್ಸ್ ಜಂಕ್ಷನ್, ಕಲ್ಪನಾ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಚಂದ್ರಿಕಾ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಜಯಮಹಲ್ ರಸ್ತೆ ಮುಖಾಂತರ ರೈಲ್ವೆ ಸ್ವೇಷನ್ ರಸ್ತೆ ಕಂಟೋನ್ಮಂಟ್ ಮೂಲಕ ಫ್ರೇಜರ್ ಟೌನ್ ಅಥವಾ ಕ್ರೀನ್ಸ್ ರಸ್ತೆಯ ಮೂಲಕ ಸಂಚರಿಸಬಹುದು.
ಸೇಂಟ್ ಜೋಸೆಫ್ ಕಾಲೇಜು ಬಳಿ ಮತ ಎಣಿಕೆ ಕೇಂದ್ರ
ಇಲ್ಲಿ ವಾಹನ ನಿಲುಗಡೆ ನಿಷೇಧ-
-ವಿಠಲ್ ಮಲ್ಯ ರಸ್ತೆ-ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಯಂಡ್ ಜಂಕ್ಷನ್‌ವರೆಗೆ
-ಆರ್.ಆರ್.ಎಂ.ಆರ್ ರಸ್ತೆ- ರಿಚ್ಮಂಡ್ ಸರ್ಕಲ್‌ನಿಂದ ಹಡ್ಸನ್ ಜಂಕ್ಷನ್‌ವರೆಗೆ
-ಎನ್ ಆರ್ ರಸ್ತೆ- ಹಡ್ಸನ್ ಸರ್ಕಲ್‌ನಿಂದ ಟೌನ್ ಹಾಲ್ ಜಂಕ್ಷನ್‌ವರೆಗೆ
-ಕೆ ಬಿ ರಸ್ತೆ- ಹೆಚ್ ಎಲ್ ಡಿ ಜಂಕ್ಷನ್‌ನಿಂದ ಕ್ವೀನ್ಸ್ ಜಂಕ್ಷನ್‌ವರೆಗೆ
-ಕೆ ಜಿ ರಸ್ತೆ-ಪೊಲೀಸ್ ಕಾರ್ನರ್ ಜಂಕ್ಷನ್‌ನಿಂದ ಮೈಸೂರು ಬ್ಯಾಂಕ್ ಜಂಕ್ಷನ್ ವರೆಗೆ
-ನೃಪತುಂಗ ರಸ್ತೆ- ಕೆ.ಆರ್.ಜಂಕ್ಷನ್‌ನಿಂದ ಪೊಲೀಸ್ ಕಾರ್ನರ್‌ವರೆಗೆ-ಕ್ವೀನ್ಸ್ ರಸ್ತೆ- ಬಾಳೇಕುಂದ್ರಿ ಸರ್ಕಲ್‌ನಿಂದ ಸಿ.ಟಿ.ಓ ಸರ್ಕಲ್‌ವರೆಗೆ
-ಸೆಂಟ್ರಲ್ ಸ್ಟ್ರೀಟ್ ರಸ್ತೆ- ಬಿ.ಆರ್.ವಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ
-ಎಂ.ಜಿ ರಸ್ತೆ- ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ಜಂಕ್ಷನ್‌ವರೆಗೆಇಲ್ಲಿ ವಾಹನ ನಿಲುಗಡೆ ಮಾಡಿ:
*ಸೇಂಟ್ ಜೋಸೆಫ್ ಕಾಲೇಜು ಮೈದಾನ
*ಕಂಠೀರವ ಸ್ಟೇಡಿಯಂ ಪಾರ್ಕಿಂಗ್ ಸ್ಥಳಎಸ್‌ಎಸ್‌ಎಂಆರ್‌ವಿ ಕಾಲೇಜು
ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ 18ನೇ ಮುಖ್ಯ ರಸ್ತೆ ಮತ್ತು 28ನೇ ಮುಖ್ಯ ರಸ್ತೆಯ ಮಧ್ಯದಲ್ಲಿ ಬರುವ 36ನೇ ಕ್ರಾಸ್. 32ನೇ ಇ ಕ್ರಾಸ್ ರಸ್ತೆ ಮತ್ತು 39ನೇ ಕ್ರಾಸ್ ರಸ್ತೆ ಜಂಕ್ಷನ್ ನಡುವೆ ಬರುವ 26ನೇ ಮುಖ್ಯ ರಸ್ತೆಗಳಲ್ಲಿ ಬೆಳಗ್ಗೆ 6ರಿಂದ ಮತ ಎಣಿಕೆ ಮುಗಿಯುವವರೆಗೂ ಎಲ್ಲಾ ಮಾದರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗಗಳು:
ಈಸ್ಟ್ ಎಂಡ್ ಮುಖ್ಯ ರಸ್ತೆ, 39ನೇ ಕ್ರಾಸ್ ರಸ್ತೆ, 18ನೇ ಮುಖ್ಯ ರಸ್ತೆ, 32ನೇ ಇ ಕ್ರಾಸ್ ರಸ್ತೆಗಳನ್ನು ವಾಹನ ಸವಾರರು ಬಳಸಬಹುದಾಗಿದೆ.