ಸಾರಾಂಶ
ಕನಕಪುರ: ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಾಣಲು ಸಾಧ್ಯವಾಗುತ್ತದೆ ಎಂದು ರೂರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಶ್ರೀಕಂಠು ತಿಳಿಸಿದರು.
ಕನಕಪುರ: ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಾಣಲು ಸಾಧ್ಯವಾಗುತ್ತದೆ ಎಂದು ರೂರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಶ್ರೀಕಂಠು ತಿಳಿಸಿದರು.
ತಾಲೂಕಿನ ದೊಂಬರದೊಡ್ಡಿಯದಲ್ಲಿ ಗ್ರಾಮಾಂತರ ಪದವಿ ಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಯುವಕರು ದುಶ್ಚಟಗಳಿಗೆ ಬಲಿಯಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ದುಶ್ಚಟಗಳಿಂದ ದೂರವಿದ್ದು ಪ್ರತಿಯೊಬ್ಬರು ಶಿಕ್ಷಣ ಪಡೆದುಕೊಳ್ಳಬೇಕು. ಶಿಕ್ಷಣ ಇದ್ದರೆ ಸಾಕಷ್ಟು ಅವಕಾಶಗಳ ಬಾಗಿಲು ತೆರೆದುಕೊಳ್ಳುತ್ತದೆ ಎಂದರು.ಆರ್‌ಇಎಸ್ ಸಂಸ್ಥೆಯಿಂದ ರಾಷ್ಟ್ರೀಯ ಸೇವಾ ಯೋಜನೆಯಡಿ ಈ ಗ್ರಾಮದಲ್ಲಿ ಸ್ವಚ್ಛತೆ ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಎನ್‌ಎಸ್‌ಎಸ್ ಶಿಬಿರ ಹಮ್ಮಿಕೊಳ್ಳಲಾಗಿದೆ. ನಿಂತ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೀ, ಮಲೇರಿಯಾ ದಂತಹ ಸಾಂಕ್ರಾಮಿಕ ರೋಗಗಳು ಹರಡಲು ಕಾರಣವಾಗುತ್ತದೆ. ಸಂಸ್ಥೆಯ ವಿದ್ಯಾರ್ಥಿಗಳು ಈ ಗ್ರಾಮದಲ್ಲೇ ಇದ್ದು ಇಲ್ಲಿ ಪರಿಸರ ಮತ್ತು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾರೆ ಎಂದರು.
ಸಂಸ್ಥೆ ನಿರ್ದೇಶಕ ಕೆ.ಬಿ. ನಾಗರಾಜು, ರೂರಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮಲ್ಲಿಕಾರ್ಜುನಯ್ಯ, ಶಿಬಿರದ ಅಧಿಕಾರಿ ಕುಮಾರ್, ಅಶೋಕ್ ತೋಟದಾರ್ಯ ಸ್ವಾಮಿ, ಶೋಭಾ, ವೀಣಾ, ದೈಹಿಕ ಶಿಕ್ಷಕಿ ಲಕ್ಷ್ಮೀ ಇದ್ದರು.