ಸಾರಾಂಶ
ಹೊಸಬರಿಗೆ ಮತ್ತು ಯುವಕರಿಗೆ ಆದ್ಯತೆ ನೀಡಬೇಕೆಂಬ ಉದ್ದೇಶದಿಂದ ಇತ್ತೀಚೆಗೆ ಮದ್ದೂರಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕ ಉದಯ್ ಸಮ್ಮುಖದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರಸ್ತಾಪ ಮಾಡಿ ಯುವಕರಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದೆ.
ಕನ್ನಡಪ್ರಭ ವಾರ್ತೆ ಮದ್ದೂರು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ನನ್ನ ಸ್ವಇಚ್ಛೆಯಿಂದ ನಡೆದಿದೆ ಹೊರತು ಇದರಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ ಎಂದು ನಿಕಟಪೂರ್ವ ಅಧ್ಯಕ್ಷ ಕದಲೂರು ರಾಮಕೃಷ್ಣ ಹೇಳಿದರು.ಪಟ್ಟಣದ ಶಿವಪುರದ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ ಹಾಗೂ ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರಿಗೆ ಸ್ಪಷ್ಟನೆ ನೀಡಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆಡಳಿತಾವಧಿ ನಂತರ ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದಿದ್ದರೂ ನಾನೇ ಜವಾಬ್ದಾರಿ ತೆಗೆದುಕೊಂಡು ಸುಮಾರು 25 ವರ್ಷಗಳ ಕಾಲಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಿ ಕೆಲಸ ಮಾಡಿದ್ದೇನೆ ಎಂದರು.ಈಗ ಹೊಸಬರಿಗೆ ಮತ್ತು ಯುವಕರಿಗೆ ಆದ್ಯತೆ ನೀಡಬೇಕೆಂಬ ಉದ್ದೇಶದಿಂದ ಇತ್ತೀಚೆಗೆ ಮದ್ದೂರಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕ ಉದಯ್ ಸಮ್ಮುಖದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರಸ್ತಾಪ ಮಾಡಿ ಯುವಕರಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದೆ ಎಂದರು.
ಹೀಗಾಗಿ ಮದ್ದೂರು ಬ್ಲಾಕ್ ಅಧ್ಯಕ್ಷರಾಗಿ ಚೆಲುವರಾಜು ಹಾಗೂ ಭಾರತೀ ನಗರ ಬ್ಲಾಕ್ ಅಧ್ಯಕ್ಷರಾಗಿ ಅಣ್ಣೂರು ರಾಜೀವ್ ಅವರನ್ನು ನೇಮಕ ಮಾಡಿದ್ದಾರೆ. ನೂತನ ಬ್ಲಾಕ್ ಅಧ್ಯಕ್ಷರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಶಾಸಕರು ಮತ್ತು ನೂತನ ಅಧ್ಯಕ್ಷರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಒಗ್ಗೂಡಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.ನನ್ನ ಅಧ್ಯಕ್ಷ ಸ್ಥಾನದ ಅವಧಿಯಲ್ಲಿ ಪಕ್ಷದ ಹಿರಿಯ ಮತ್ತು ಕಿರಿಯ ಮುಖಂಡರು ವಿವಿಧ ಘಟಕಗಳ ಪದಾಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರುಗಳು ಸಹಕಾರ ನೀಡಿದ್ದಾರೆ. ಈ ಎಲ್ಲರ ಮಾರ್ಗದರ್ಶನದಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವುದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚೆಲುವರಾಜು, ಅಣ್ಣೂರು ರಾಜೀವ್, ಪುರಸಭಾ ಮಾಜಿ ಅಧ್ಯಕ್ಷ ಎಂ.ಪಿ.ಅಮರ ಬಾಬು, ಮುಖಂಡರಾದ ಬೆಸಗರಹಳ್ಳಿ ಗೋಪಿ, ವಕೀಲ ನಾಗರಾಜು, ಕೂಳೆಗೆರೆ ಜಯರಾಮ್ ಮತ್ತಿತರರಿದ್ದರು.