ಏಡ್ಸ್ ಸೋಂಕಿತರ ನೋಡುವ ದೃಷ್ಟಿ ಬದಲಾಗಲಿ

| Published : Dec 05 2024, 12:31 AM IST

ಸಾರಾಂಶ

ಏಡ್ಸ್ ರೋಗವು ರಕ್ತದಿಂದ ಹರಡುವ ಕಾಯಿಲೆಯಾಗಿದ್ದು ಲೈಂಗಿಕ ಸಂಪರ್ಕ, ಒಬ್ಬರು ಬಳಸಿದ ಸೂಜಿ, ಕತ್ತರಿಯನ್ನು ಇನ್ನೊಬ್ಬರು ಬಳಸಿದಾಗ, ಸ್ತನ್ಯಪಾನದಿಂದ ಹೀಗೆ ಮುಂತಾದ ಕಾರಣಗಳಿಂದ ಏಡ್ಸ್‌ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಏಡ್ಸ್ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಮೂಡಿಸಬೇಕು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಏಡ್ಸ್ ಸೋಂಕು ಚುಚ್ಚು ಮದ್ದುಗಳ ಸಲಕರಣೆಗಳನ್ನು ಪುನರ್ ಬಳಕೆಯಿಂದ ಹಾಗೂ ಸೋಂಕಿತ ಗರ್ಭಿಣಿಯರಿಂದ ಶಿಶುಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡುತ್ತದೆ. ಏಡ್ಸ್ ಸೋಂಕಿತರನ್ನು ಸಮಾಜ ನೋಡುವ ದೃಷ್ಟಿಕೋನ ಬದಲಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ ತಿಳಿಸಿದರು.ನಗರ ಹೊರವಲಯದ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನ-2024 ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಎಲ್ಲರೂ ಒಂದಾಗಿ ಏಡ್ಸ್ ವಿರುದ್ಧ ಹೋರಾಡುವಂತೆ ಪ್ರೇರೇಪಿಸುವ ಸಲುವಾಗಿ ಪ್ರತಿ ಡಿಸೆಂಬರ್ 1ರಂದು ಆಚರಿಸಲಾಗುತ್ತಿದೆ ಎಂದರು.

ಏಡ್ಸ್‌ ತಡೆಗೆ ಅರಿವು ಮೂಡಿಸಿ

ಏಡ್ಸ್ ರೋಗವು ರಕ್ತದಿಂದ ಹರಡುವ ಕಾಯಿಲೆಯಾಗಿದ್ದು ಲೈಂಗಿಕ ಸಂಪರ್ಕ, ಒಬ್ಬರು ಬಳಸಿದ ಸೂಜಿ, ಕತ್ತರಿಯನ್ನು ಇನ್ನೊಬ್ಬರು ಬಳಸಿದಾಗ, ಸ್ತನ್ಯಪಾನದಿಂದ ಹೀಗೆ ಮುಂತಾದ ಕಾರಣಗಳಿಂದ ಏಡ್ಸ್‌ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಏಡ್ಸ್ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಮೂಡಿಸಬೇಕು. ಒಳ್ಳೆಯ ಆರೋಗ್ಯ ಹೊಂದಿರಬೇಕು ಎಂದರೆ ಕೆಟ್ಟ ಹವ್ಯಾಸಗಳನ್ನು ಬಿಟ್ಟು ಒಳ್ಳೆಯ ದಾರಿಯಲ್ಲಿ ನಡೆಯಬೇಕು. ಏಡ್ಸ್ ನಿಂದ ಸೋಂಕಿತ ಹಾಗೂ ಕಳಂಕ, ತಾರತಮ್ಯಕ್ಕೆ ಒಳಗಾದ ವ್ಯಕ್ತಿಗಳಿಗೆ ನೈತಿಕ ಬೆಂಬಲವನ್ನು ನೀಡಬೇಕು ಎಂದರು.

ಸರ್ಕಾರವು ಎಚ್.ಐ.ವಿ ಸೋಂಕಿತರಿಗೆ ಹಲವಾರು ರೀತಿಯ ಯೋಜನೆಗಳನ್ನು ನೀಡುವುದರ ಮೂಲಕ ಹೆಚ್.ಐ.ವಿ ಸೋಂಕನ್ನು ತಡೆಗಟ್ಟಲು ಮುಂದಾಗುತ್ತಿದೆ. ಏಡ್ಸ್ ಸೋಂಕಿತರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜಿಕ್ಕಬಳ್ಳಾಪುರ ಜಿಲ್ಲೆಯನ್ನು ಡ್ಸ್ ಮುಕ್ತ ಜಿಲ್ಲೆಯಾಗಿಸಬೇಕು ಎಂದು ಮನವಿ ಮಾಡಿದರು.

ರಕ್ತದಿಂದ ಹರಡುವ ಸೋಂಕು ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ್ ಮಾತನಾಡಿ, ಮಾರಕ ರೋಗಗಳಲ್ಲಿ ಜಗತ್ತನ್ನು ಕಾಡಿದ್ದ ಏಡ್ಸ್ ರೋಗವು ಕೂಡ ಒಂದು. ಇದೊಂದು ರಕ್ತದಲ್ಲಿ ಹರಡುವ ಕಾಯಿಲೆಯಾಗಿದೆ. ಈ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಏಡ್ಸ್ ದಿನವನ್ನು ಮೊದಲ ಬಾರಿಗೆ 1988ರಲ್ಲಿ ಮೊದಲ ಬಾರಿಗೆ ಆಚರಿಸಲಾಯಿತು ಎಂದು ತಿಳಿಸಿದರು. ಈ ವೇಳೆ 2024ರ ವಿಶ್ವ ಏಡ್ಸ್ ದಿನದ ಘೋಷವಾಕ್ಯವಾದ “ಸರಿಯಾದ ಮಾರ್ಗದಲ್ಲಿ ಹಕ್ಕುಗಳನ್ನು ಪಡೆಯೋಣ ನನ್ನ ಆರೋಗ್ಯ, ನನ್ನ ಹಕ್ಕು” ಎಂಬ ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ಏಡ್ಸ್ ನ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು.

ಏಡ್ಸ್‌ ಸೋಂಕು ಅರಿವು ಜಾಥಾ

ಕಾರ್ಯಕ್ರಮಕ್ಕೂ ಮುನ್ನ ಏಡ್ಸ್ ತಡೆಗಟ್ಟಲು ಅರಿವು ಮೂಡಿಸುವ ಜಾಥಾವು ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಿಂದ ಸಾಗಿ ರಸ್ತೆಗಳಲ್ಲಿ ಬ್ಯಾನರ್ ಪ್ರದರ್ಶಿಸಿಸುವ ಮೂಲಕ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಬಳಿ ಮುಕ್ತಾಯವಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿಗಳು ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಡಿ.ಟಿ ಉಮಾ, ತಾಲೂಕು ವೈದ್ಯಾಧಿಕಾರಿ ಮಂಜುಳ, ಪ್ರಾಂಶುಪಾಲ ಚಂದ್ರಯ್ಯ, ಜನರಲ್ ಸರ್ಜನ್ ಡಾ. ನರಸಿಂಹಮೂರ್ತಿ, ಬೃಂದ, ಶೋಭ, ಪ್ರಸನ್ನ ಕುಮಾರ್, ಅಶ್ವಥ್, ಚೈತ್ರ, ಜಯಶೀಲ, ಲಲಿತಮ್ಮ ಹಾಗೂ ಬೋಧಕ ವರ್ಗದವರು, ವಿದ್ಯಾರ್ಥಿನಿಯರು ಮತ್ತಿತರರು ಇದ್ದರು.