ಹೊಸಕೋಟೆ: ಬದಲಾದ ಕಾಲಘಟ್ಟದಲ್ಲಿ ಮನುಷ್ಯನ ಆಹಾರ ಪದ್ಧತಿ ಹಾಗೂ ಜೀವನ ಪದ್ಧತಿ ಪರಿಣಾಮವೇ ಆರೋಗ್ಯ ಸಮಸ್ಯೆ ಜೊತೆಗೆ ಕಣ್ಣಿನ ಸಮಸ್ಯೆ ಉಲ್ಬಣವಾಗಲು ಕಾರಣ ಎಂದು ಹೊಸಕೋಟಿ ಜೆಎಂಎಫ್ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.
ನಗರದದಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಹದಿಹರೆಯದ ಯುವಕ ಯುವತಿಯರಲ್ಲಿ ಕಣ್ಣಿನ ಸಮಸ್ಯೆಗಳು ಉಲ್ಬಣವಾಗುತ್ತಿದೆ. ಮುಖ್ಯವಾಗಿ ಮೊಬೈಲ್ ಬಳಕೆ, ಟಿವಿ ವೀಕ್ಷಣೆ ಒಂದೆಡೆಯಾದರೆ ಸೇವಿಸುವ ಆಹಾರ ಪದ್ಧತಿಯಿಂದಲೂ ಕಣ್ಣಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಮನುಷ್ಯನ ದೇಹದಲ್ಲಿ ಕಣ್ಣು ಅಮೂಲ್ಯ ಅಂಗ. ಇದರ ರಕ್ಷಣೆ ಅತ್ಯಗತ್ಯ. ಆದ್ದರಿಂದ ಎಷ್ಟೇ ಆರೋಗ್ಯವಾಗಿದ್ದರೂ ಕಾಲಕಾಲಕ್ಕೆ ಆರೋಗ್ಯದ ಜೊತೆಗೆ ನೇತ್ರ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಬಿಟಿ ವಿಶ್ವನಾಥ ಮಾತನಾಡಿ, ನಮ್ಮ ಸಂಘಟನೆ ಹಲವಾರು ರೀತಿಯ ಸಾಮಾಜಿಕ ಕಾರ್ಯಗಳ ಜೊತೆ ಜೊತೆಗೆ ನೇತ್ರ ತಪಾಸಣೆ ಶಿಬಿರಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಮಂಜುಳಾ, ಕಲಾವಿದ ಶಿವಕುಮಾರ ಆರಾಧ್ಯ, ಮೇದಶ್ರೀ ಶಾಲೆ ಪ್ರಾಂಶುಪಾಲ ಅಶ್ವತ್ ನಾರಾಯಣ್, ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಅಂಬು ಸೇಲ್ವಂ, ವೈದ್ಯಾಧಿಕಾರಿಗಳಾದ ಡಾ.ರಾಘವೇಂದ್ರ, ಡಾ.ಮಂಜುನಾಥ್, ಸಮಾಜ ಸೇವಕ ರಾಧಾ ಗೋವಿಂದ್, ರವಿ, ರತ್ನಮ್ಮ, ವರಲಕ್ಷ್ಮಿ ಇತರರು ಹಾಜರಿದ್ದರು.ಫೋಟೋ : 24 ಹೆಚ್ ಎಸ್ ಕೆ 1
ಹೊಸಕೋಟೆಯಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ಉದ್ಘಾಟಿಸಿದರು.