ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸುಳ್ಯದಿಂದ ಮೂಲ್ಕಿವರೆಗೆ ಹಮ್ಮಿಕೊಂಡ ನಾಲ್ಕು ದಿನಗಳ ಬೃಹತ್ ಪಾದಯಾತ್ರೆಯು ಕುಳೂರು ಬಳಿ ಬಂದಾಗ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಸ್ವಾಗತಿಸಲಾಯಿತು.
ಮೂಲ್ಕಿ: ಕೇಂದ್ರ ಸರ್ಕಾರವು ಮನ್‌ರೇಗಾ ಯೋಜನೆಯಿಂದ ಗಾಂಧಿಯವರ ಹೆಸರನ್ನು ತೆಗೆದುಹಾಕಿ ಅಪಮಾನ ಮಾಡಿದ್ದು ಈ ಯೋಜನೆಯ ಬದಲಾವಣೆಯಿಂದ ಬಡವರಿಗೆ ಅನ್ಯಾಯವಾಗಿದ್ದು ಮರುಸ್ಥಾಪನೆಯಾಗುವವರೆಗೂ ಹೋರಾಟ ನಿಲ್ಲದು. 2029ರ ಲೋಕಸಭೆ ಚುನಾವಣೆಯಲ್ಲಿ ಗುರಿಯನ್ನು ಸಾರಿದ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡುವುದೇ ನಮ್ಮ ಏಕೈಕ ಗುರಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹೇಳಿದರು.
ಮನ್ ರೇಗಾ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಹಾತ್ಮ ಗಾಂಧೀಜಿಯವರ ಹೆಸರು ಕೈಬಿಟ್ಟಿರುವುದನ್ನು ಖಂಡಿಸಿ ಹಾಗೂ ಯೋಜನೆಯ ಹಳೆಯ ಸ್ವರೂಪದ ಮರುಸ್ಥಾಪನೆಗೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸುಳ್ಯದಿಂದ ಮೂಲ್ಕಿವರೆಗೆ ಹಮ್ಮಿಕೊಂಡ ನಾಲ್ಕು ದಿನಗಳ ಬೃಹತ್ ಪಾದಯಾತ್ರೆಯು ಕುಳೂರು ಬಳಿ ಬಂದಾಗ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಸ್ವಾಗತಿಸಿದ ಸಂದರ್ಭ ಅವರು ಮಾತನಾಡಿದರು. ಪಾದಯಾತ್ರೆಯುದ್ದಕ್ಕೂ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಹೈಕಮಾಂಡ್ ಮುಂದೆ ಅಲಿ ಭರ್ಜರಿ ಶಕ್ತಿ ಪ್ರದರ್ಶನ ಮಾಡಿದರು. ಕೂಳೂರು ಗೋಲ್ಡ್ ಪಿಂಚ್ ಮೈದಾನದಿಂದ ಆರಂಭಗೊಂಡ ಮೆರವಣಿಗೆ ಸುರತ್ಕಲ್‌ವರೆಗೂ ಅತ್ಯಂತ ಅಬ್ಬರದಿಂದ ಸಾಗಿತು. ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಹೆಜ್ಜೆ ಹಾಕಿದರು. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಪಕ್ಷದ ನಾಯಕರು, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಪಕ್ಷದ ಧುರೀಣರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಪಾವಂಜೆಯಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ನೇತ್ರತ್ವದಲ್ಲಿ ಪಾದಯಾತ್ರೆಯನ್ನು ಸ್ವಾಗತಿಸಿತು. ಸುರತ್ಕಲ್‌ನ ಕುಲಾಲ ಭವನದಲ್ಲಿ ಜಮಾವಣೆಗೊಂಡ ಕಾರ್ಯಕರ್ತರಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು.