ಸಾರಾಂಶ
ಚನ್ನಗಿರಿ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಿ, ಸಂಭ್ರಮಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು, ಬೋಧಕರು, ಪೋಷಕರು ಅಭಿನಂದಿಸಿದರು.
- ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು, ಬೋಧಕರು, ಪೋಷಕರು ಖುಷ್- - - ಕನ್ನಡಪ್ರಭ ವಾರ್ತೆ, ಚನ್ನಗಿರಿ
ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಿ, ಸಂಭ್ರಮಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು, ಬೋಧಕರು, ಪೋಷಕರು ಅಭಿನಂದಿಸಿದರು.ಮಾಚನಾಯ್ಕನಹಳ್ಳಿ ಗ್ರಾಮದ ಶ್ರೀ ಬಸವ ವಿದ್ಯಾಪೀಠದ ಶ್ರೀ ಬಸವ ಪ್ರೀಯ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 59 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 58 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುನ್ಯತ ಶ್ರೇಣಿಯಲ್ಲಿ 18, ಪ್ರಥಮ ಶೇಣಿಯಲ್ಲಿ 40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಅಕ್ಷರ ಆರ್. ಎಂಬ ವಿದ್ಯಾರ್ಥಿನಿ ಅತಿ ಹೆಚ್ಚಿನ 580 ಅಂಕ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 26 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. 10 ವಿದ್ಯಾರ್ಥಿಗಳು ಅತ್ಯುನ್ಯತ ಶ್ರೇಣಿ, 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಜನ ಅತಿ ಹೆಚ್ಚಿನ 580 ಅಂಕಗಳ ಪಡೆದಿದ್ದಾರೆ. ಶೇಕಡವಾರು ಕಾಲೇಜಿಗೆ 99ರಷ್ಟು ಫಲಿತಾಂಶ ದೊರೆತಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.ಮಣ್ಣಮ್ಮ ಕಾಲೇಜು:
ಪಟ್ಟಣದ ಮಣ್ಣಮ್ಮ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗಗಳಿಂದ 102 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 88 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಲಾ ವಿಭಾಗದಲ್ಲಿ 74 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 56 ಮಂದಿ ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 28 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಚಾರ್ಯ ಮಂಜಪ್ಪ ತಿಳಿಸಿದ್ದಾರೆ.ಸಂತೆಬೆನ್ನೂರು ಕಾಲೇಜು:
ಸಂತೆಬೆನ್ನೂರಿನ ಸರ್ಕಾರಿ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 44 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 34 ಮಂದಿ ಪಾಸಾಗಿದ್ದಾರೆ. ಕಲಾ ವಿಭಾಗದಲ್ಲಿ 83 ಜನ ಪರೀಕ್ಷೆ ಬರೆದಿದ್ದರು. ಇವರಲ್ಲಿ 42 ಜನ ತೇರ್ಗಡೆಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 44 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 34 ಜನ ಪಾಸಾಗಿದ್ದಾರೆ ಎಂದು ಪ್ರಾಚಾರ್ಯ ರಂಗನಾಥ್ ತಿಳಿಸಿದ್ದಾರೆ.ಗ್ಲೋಬಲ್ ಕಾಲೇಜು:
ಪಟ್ಟಣದ ಗ್ಲೋಬಲ್ ಪದವಿಪೂರ್ವ ಕಾಲೇಜಿನಲ್ಲಿ 106 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆದಿದ್ದು, ಅವರಲ್ಲಿ 104 ಜನ ತೇರ್ಗಡೆ ಹೊಂದಿದ್ದಾರೆ. ಕಾಲೇಜಿಗೆ ಶೇ.98.11 ಫಲಿತಾಂಶ ದೊರೆತಿದೆ ಎಂದು ಪ್ರಾಚಾರ್ಯ ಶ್ರೀನಿವಾಸ್ ತಿಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 32 ಮಂದಿ ಪರೀಕ್ಷೆ ಬರೆದಿದ್ದರು. ಇವರಲ್ಲಿ 31 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 40 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 34 ಜನ ಪರೀಕ್ಷೆ ಬರೆದಿದ್ದು, 33 ಜನ ತೇರ್ಗಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.ರಾಮಲಿಂಗೇಶ್ವರ ಕಾಲೇಜು:
ಕೆಂಗಾಪುರ ಗ್ರಾಮದ ಶ್ರೀ ರಾಮಲಿಂಗೇಶ್ವರ ಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ, ವಿಜ್ಞಾನ, ವಾಣಿಜ್ಯ ವಿಭಾಗಗಳಿಂದ 102 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 92 ಜನ ಪಾಸಾಗಿ, ಶೇಕಡ 90ರಷ್ಟು ಫಲಿತಾಂಶ ಕಾಲೇಜಿಗೆ ದೊರೆತಿದೆ ಎಂದು ಪ್ರಾಚಾರ್ಯ ದಾದಾಪೀರ್ ತಿಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 72 ಜನ ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತಿರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 39 ಜನ ಪರೀಕ್ಷೆ ಬರೆದಿದ್ದು, 34 ಜನ ಪಾಸಾಗಿದ್ದಾರೆ. ಕಲಾ ವಿಭಾಗದಲ್ಲಿ 41 ಜನ ಪರೀಕ್ಷೆ ಬರೆದಿದ್ದು, 35 ಜನ ತೇರ್ಗಡೆಹೊಂದಿದ್ದಾರೆ.- - - (-ಸಾಂದರ್ಭಿಕ ಚಿತ್ರ)