ಚನ್ನಗಿರಿ ಪೊಲೀಸ್ ಉಪಾಧೀಕ್ಷಕ ರುದ್ರಪ್ಪ ಎಸ್.ಉಜ್ಜನಕೊಪ್ಪ ಅವರು ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಚನ್ನಗಿರಿ, ಬಸವಾಪಟ್ಟಣ, ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಕಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 160 ಆರೋಪಿತರನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ.
- ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ತಿಳಿಹೇಳಿದ ರುದ್ರಪ್ಪ ಉಜ್ಜನಕೊಪ್ಪ
- - -ಕನ್ನಡಪ್ರಭ ವಾರ್ತೆ ಚನ್ನಗಿರಿ
ಚನ್ನಗಿರಿ ಪೊಲೀಸ್ ಉಪಾಧೀಕ್ಷಕ ರುದ್ರಪ್ಪ ಎಸ್.ಉಜ್ಜನಕೊಪ್ಪ ಅವರು ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಚನ್ನಗಿರಿ, ಬಸವಾಪಟ್ಟಣ, ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಕಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 160 ಆರೋಪಿತರನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದರು.ಈ ಸಂದರ್ಭ ಮಾತನಾಡಿದ ಅವರು ಚನ್ನಗಿರಿ ವಿಭಾಗದ ವ್ಯಾಪ್ತಿಯಲ್ಲಿ 328 ಜನ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿದ್ದಾರೆ. ಈ ದಿನ ಚನ್ನಗಿರಿ, ಸಂತೆಬೆನ್ನೂರು, ಬಸವಾಪಟ್ಟಣ ಠಾಣೆಗಳ ವ್ಯಾಪ್ತಿಯ ಆರೋಪಿಗಳಿಗೆ ಠಾಣೆಗೆ ಕರೆದು, ವೈಯಕ್ತಿಕ ಮಾಹಿತಿ ಪಡೆದು, ಅಪರಾಧ ಪ್ರಕರಣಗಳಲ್ಲಿ ಭಾಗಿಯಾದಂತೆ ಎಚ್ಚರಿಕೆ ನೀಡಲಾಗಿದೆ ಎಂದರು.
ಚನ್ನಗಿರಿ ತಾಲೂಕಿನಲ್ಲಿ ಶಾಂತಿ, ಸುವ್ಯವಸ್ಥೆಗೆ ಅಡ್ಡಿ ಮಾಡದೇ ಸನ್ನಡತೆಯಲ್ಲಿ ಇರಬೇಕು. ಕಾನೂನು ಸುವಸ್ಥೆಗೆ ಧಕ್ಕೆ ಉಂಟಾದರೆ ಮೊದಲು ನಿಮ್ಮನ್ನೇ ವಿಚಾರಣೆಗೆ ಒಳಪಡಿಸಲಾಗುವುದು. ತಾಲೂಕಿನಲ್ಲಿ ಶಾಂತಿ ಪಾಲನೆ ಎಲ್ಲರ ಆದ್ಯ ಕರ್ತವ್ಯ. ರಾಬರಿ, ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗದೇ ಉತ್ತಮ ನಾಗರೀಕರಾಗಿ ಜೀವಿಸಬೇಕು. ಮತ್ತೆ ಕಳವು ಪ್ರಕರಣಗಳಲ್ಲಿ ಭಾಗಿಯಾದರೆ ಅತ್ಯಂತ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದು ಎಚ್ಚರಿಸಿದರು.ಸಂತೆಬೆನ್ನೂರು ವಿಭಾಗದ ಸಿಪಿಐ ಮಲ್ಲಮ್ಮ ಚುಬೆ, ಪಿಎಸ್ಐ ಜಗದೀಶ್, ಚನ್ನಗಿರಿ ಪೊಲೀಸ್ ಠಾಣೆಯ ಪಿಎಸ್ಐಗಳಾದ ಸುರೇಶ್, ಗುರುಶಾಂತಪ್ಪ ಸಿಬ್ಬಂದಿ ಹಾಜರಿದ್ದರು.
- - --4ಕೆಸಿಎನ್‌ಜಿ1.ಜೆಪಿಜಿ:
ಚನ್ನಗಿರಿ ಪಟ್ಟಣ ಪೊಲೀಸ್ ಠಾಣೆ ಆವರಣದಲ್ಲಿ ಡಿವೈಎಸ್ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ ಆರೋಪಿಗಳನ್ನು ವಿಚಾರಣೆ ನಡೆಸಿ, ಮಾಹಿತಿ ಪಡೆದು ಸಲಹೆ-ಸೂಚನೆಗಳ ನೀಡಿದರು.