ಚನ್ನಗಿರಿ: ಬೀಜ-ಗೊಬ್ಬರ ಅಂಗಡಿಗಳಲ್ಲಿ ಪರಿಶೀಲನೆ

| Published : Jul 23 2025, 03:01 AM IST

ಚನ್ನಗಿರಿ: ಬೀಜ-ಗೊಬ್ಬರ ಅಂಗಡಿಗಳಲ್ಲಿ ಪರಿಶೀಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಪಟ್ಟಣದ ಖಾಸಗಿ ಬಿತ್ತನೆಬೀಜ- ರಸಗೊಬ್ಬರಗಳ ಮಾರಾಟ ಅಂಗಡಿಗಳಿಗೆ ಮಂಗಳವಾರ ಉಪವಿಭಾಗಾಧಿಕಾರಿ ಅಭಿಷೇಕ್ ನೇತೃತ್ವದಲ್ಲಿ ತಹಸೀಲ್ದಾರ್ ಎನ್.ಜೆ.ನಾಗರಾಜ್, ತಾ.ಪಂ. ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ. ಉತ್ತಮ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಅವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

- ಎಸಿ ನೇತೃತ್ವದಲ್ಲಿ ತಹಸೀಲ್ದಾರ್‌, ತಾಪಂ ಇಒ, ಕೃಷಿ ಅಧಿಕಾರಿಗಳ ತಂಡ ಭೇಟಿ

- - -

ಕನ್ನಡಪ್ರಭ ವಾರ್ತೆ ಚನ್ನಗಿರಿ

ಪಟ್ಟಣದ ಖಾಸಗಿ ಬಿತ್ತನೆಬೀಜ- ರಸಗೊಬ್ಬರಗಳ ಮಾರಾಟ ಅಂಗಡಿಗಳಿಗೆ ಮಂಗಳವಾರ ಉಪವಿಭಾಗಾಧಿಕಾರಿ ಅಭಿಷೇಕ್ ನೇತೃತ್ವದಲ್ಲಿ ತಹಸೀಲ್ದಾರ್ ಎನ್.ಜೆ.ನಾಗರಾಜ್, ತಾ.ಪಂ. ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ. ಉತ್ತಮ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅರುಣ್ ಅವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಈ ಸಂದರ್ಭ ಉಪ ವಿಭಾಗಾಧಿಕಾರಿ ಅಭಿಷೇಕ್ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಸ್ತುತವಾಗಿ ಮುಂಗಾರು ಮಳೆ ಆರಂಭಗೊಂಡಿದೆ. ರೈತರಿಗೆ ಸಮಯಕ್ಕೆ ಸರಿಯಾಗಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜ- ರಸಗೊಬ್ಬರಗಳನ್ನು ಸರ್ಕಾರ ನಿಗದಿಪಡಿಸಿದ ಬೆಲೆಗೆ ಮಾರಾಟ ಮಾಡಬೇಕು. ಯಾರಾದರೂ ಬಿತ್ತನೆಬೀಜ, ರಸಗೊಬ್ಬರಗಳನ್ನು ದಾಸ್ತಾನು ಇಟ್ಟುಕೊಂಡು ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಅಂಗಡಿಗಳ ಮಾಲೀಕರು ರೈತರು ಖರೀದಿಸಿದ ರಸಗೊಬ್ಬರ, ಬಿತ್ತನೆಬೀಜಗಳಿಗೆ ಕೈ ಚೀಟಿ ನೀಡದೇ, ಅಧಿಕೃತ ಬಿಲ್ ಕಡ್ಡಾಯವಾಗಿ ನೀಡಬೇಕು. ಯೂರಿಯಾ ಗೊಬ್ಬರ ಅಭಾವವಿದೆ ಎಂಬ ದೂರುಗಳು ಬಂದಿವೆ. ಈ ದಿನ ಪಟ್ಟಣದಲ್ಲಿರುವ ಬೀಜ-ಗೊಬ್ಬರ ಮಾರಾಟ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ದಾಸ್ತಾನು ವಿವರ ಮತ್ತು ಬಿಲ್‌ಗಳನ್ನು ಪರಿಶೀಲನೆ ನಡೆಸಲಾಗಿದೆ. ಈ ಎಲ್ಲ ಮಾಹಿತಿ ಪಡೆದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

- - -

-22ಕೆಸಿಎನ್‌ಜಿ1.ಜೆಪಿಜಿ:

ಚನ್ನಗಿರಿ ಪಟ್ಟಣದ ಬೀಜ-ಗೊಬ್ಬರದ ಅಂಗಡಿಗಳ ದಾಸ್ತಾನು ಮಳಿಗೆಗಳಿಗೆ ಉಪವಿಭಾಗಾಧಿಕಾರಿ ಅಭಿಷೇಕ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿತು.