ಸಾರಾಂಶ
ಚಿತ್ರದುರ್ಗ- ಚನ್ನಗಿರಿ- ಶಿವಮೊಗ್ಗ ದ್ವಿಪಥ ಹೆದ್ದಾರಿಯನ್ನು ₹334 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ದಾವಣಗೆರೆ-ಚನ್ನಗಿರಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದಿ ಸಿಕ್ಕಿದೆ. ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ. ಚನ್ನಗಿರಿ ತಾಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಕಟಿಬದ್ಧ ಎಂದು ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಚನ್ನಗಿರಿಯಲ್ಲಿ ಭರವಸೆ ನೀಡಿದ್ದಾರೆ.
ಕನ್ನಡಪ್ರಭ ವಾರ್ತೆ, ಚನ್ನಗಿರಿ
ಚಿತ್ರದುರ್ಗ- ಚನ್ನಗಿರಿ- ಶಿವಮೊಗ್ಗ ದ್ವಿಪಥ ಹೆದ್ದಾರಿಯನ್ನು ₹334 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ದಾವಣಗೆರೆ-ಚನ್ನಗಿರಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದಿ ಸಿಕ್ಕಿದೆ. ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ. ಚನ್ನಗಿರಿ ತಾಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಕಟಿಬದ್ಧ ಎಂದು ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಭರವಸೆ ನೀಡಿದರು.ತಾಲೂಕಿನ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ತೆರೆದ ವಾಹನದಲ್ಲಿ ಮತಯಾಚನೆ ಮಾಡಿದ ಅವರು, ಸಂಸದ ಜಿ.ಎಂ.ಸಿದ್ದೇಶ್ವರ್ 20 ವರ್ಷಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ನಿಮ್ಮ ಸೇವೆಗೆ ಈ ಬಾರಿ ನನಗೆ ಅವಕಾಶ ಸಿಕ್ಕಿದೆ. ತಾಲೂಕಿನ ಸಮಗ್ರ ನೀರಾವರಿ ಯೋಜನೆ ಯಶಸ್ವಿ ಅನುಷ್ಠಾನ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಮಾತನಾಡಿ, ಲೋಕಸಭೆ ಚುನಾವಣೆ ದೇಶದ ಚುಕ್ಕಾಣಿ ಯಾರು ಹಿಡಿಯಬೇಕು ಅನ್ನೋದಾಗಿದೆ. ದೇಶದ ಒಳಿತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು. ಗಾಯತ್ರಿ ಅಮ್ಮನವರನ್ನು ಬೆಂಬಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡಬೇಕು ಎಂದರು.ತುಮ್ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ್, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಶ್ರೀನಿವಾಸ್, ತಾಪಂ ಮಾಜಿ ಉಪಾಧ್ಯಕ್ಷ ಹಾಲೇಶ್ ನಾಯ್ಕ್, ಪುರಸಭೆ ಸದಸ್ಯರಾದ ಕಮಲಾ ಹರೀಶ್, ಸವಿತಾ ರಾಘವೇಂದ್ರ ಶೆಟ್ಟಿ, ನಿರ್ಮಲಾ, ಮಹಾಂತೇಶ್, ನೂರಾರು ಕಾರ್ಯಕರ್ತರು, ಅಭಿಮಾನಿಗಳು, ಮಂಡಲದ ಅಧ್ಯಕ್ಷರು, ಸದಸ್ಯರು, ಗ್ರಾಪಂ ಸದಸ್ಯರು, ಬೂತ್ ಮಟ್ಟದ ಅಧ್ಯಕ್ಷರು, ಗ್ರಾಮದ ಬಿಜೆಪಿ ಮುಖಂಡರು, ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮುಖಂಡರು ಇದ್ದರು.
- - --12ಕೆಸಿಎನ್ಜಿ3:
ಚನ್ನಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೋಮಲಾಪುರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮತಯಾಚಿಸಿದರು.