ಶಿಬರೂರು ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

| Published : Apr 04 2024, 01:06 AM IST

ಸಾರಾಂಶ

ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಏ.26ರಂದು ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ನಡೆಯಲಿದೆ. ಬಳಿಕ ಏ.30ರ ವರೆಗೆ ವಿಶೇಷ ಜಾತ್ರಾ ಮಹೋತ್ಸವ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮೂಲ್ಕಿ

ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಏ.22ರಿಂದ ಆರಂಭಗೊಳ್ಳುವ ಬ್ರಹ್ಮ‌ಕಲಶೋತ್ಸವ ಮತ್ತು ನಾಗಮಂಡಲದ ಪೂರ್ವಭಾವಿಯಾಗಿ ಬುಧವಾರ ಜರುಗಿದ ಚಪ್ಪರ ಮುಹೂರ್ತವನ್ನು ಕ್ಷೇತ್ರದ ತಂತ್ರಿವರೇಣ್ಯ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ‌ ಮುಂದಾಳು ಶೆಡ್ಡೆ ಮಂಜುನಾಥ ಭಂಡಾರಿ ನೆರವೇರಿಸಿದರು.

ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಏ.26ರಂದು ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ನಡೆಯಲಿದೆ. ಬಳಿಕ ಏ.30ರ ವರೆಗೆ ವಿಶೇಷ ಜಾತ್ರಾ ಮಹೋತ್ಸವ ನಡೆಯಲಿದೆ. ಶಿಬರೂರುಗುತ್ತು ಗುತ್ತಿನಾರ್ ಉಮೇಶ್ ಎನ್. ಶೆಟ್ಟಿ, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಭಾಕರ ಎಸ್. ಶೆಟ್ಟಿ ಕೋಂಜಾಲಗುತ್ತು, ಕುಡುಂಬೂರುಗುತ್ತು ಜಯರಾಮ ಶೆಟ್ಟಿ, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪ್ರದ್ಯುಮ್ನ ರಾವ್ ಕೈಯೂರುಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ, ಮೊಕ್ತೇಸರ ಎಂ. ಮಧುಕರ ಅಮೀನ್, ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಕೋರ್ಯಾರು, ತುಕರಾಮ ಶೆಟ್ಟಿ ಪರ್ಲಬೈಲ್ ಗುತ್ತು, ಶಿವಾನಂದ ಶೆಟ್ಟಿ ಪಡುಮನೆ, ಸೂರಿಂಜೆ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ, ಪುರಂದರ ಎಂ. ಶೆಟ್ಟಿ , ಕಾಂತಪ್ಪ ಸಾಲಿಯಾನ್, ದಿವಾಕರ ಸಾಮಾನಿ ಚೇಳಾರ್ ಗುತ್ತು, ಸ್ವಾಗತ ಸಮಿತಿಯ ಜಿತೇಂದ್ರ ಶೆಟ್ಟಿ ಕೋರ್ಯಾರುಗುತ್ತು, ಸ್ವಯಂಸೇವಕ ಸಮಿತಿಯ ಗಿರೀಶ್ ಶೆಟ್ಟಿ ಪಡುಮನೆ, ಪ್ರಚಾರ ಮತ್ತು ಅಮಂತ್ರಣ ಸಮಿತಿಯ ವಿನೀತ್ ಶೆಟ್ಟಿ ಕೊರ್ಯಾರು ಹೊಸಮನೆ, ಅನ್ನ ಸಂತರ್ಪಣೆ ಸಮಿತಿಯ ಕಾರ್ಯಾಧ್ಯಕ್ಷ ಸುರೇಂದ್ರ ಶೆಟ್ಟಿ ದೇಂದೊಟ್ಟು, ಮಾದ್ಯಮ ಸಮಿತಿಯ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಮಾತೃ ಸಮಿತಿಯ ಪ್ರಧಾನ ಕಾರ್ಯದರ್ಶಿ ಆಶಾ ಶೆಟ್ಟಿ ಪಡುಮನೆ, ಸಾಂಸ್ಕ್ರತಿಕ ಸಮಿತಿಯ ವಿಜೇಶ್ ಶೆಟ್ಟಿ, ಅನ್ನಸಂತರ್ಪಣೆ ಸಮಿತಿಯ ಜಗದೀಶ್ ಶೆಟ್ಟಿ, ಉಗ್ರಾಣ ಸಮಿತಿ ದಯಾನಂದ ದೇವಾಡಿಗ, ಹೊರೆಕಾಣಿಕೆ ಸಮಿತಿಯ ಬಾಲಕೃಷ್ಣ ಕುಲಾಲ್, ಆರೋಗ್ಯ ಮತ್ತು ನೈರ್ಮಲ್ಯ ಸಮಿತಿಯ ಸುಜಾತ ಶೆಟ್ಟಿ, ಪ್ರಸಾದ ವಿತರಣಾ ಸಮಿತಿಯ ಸುಧಾಕರ ಶೆಟ್ಟಿ ಶಿಬರೂರುಗುತ್ತು, ವಾಹನ‌ ಪಾರ್ಕಿಗ್ ಸಮಿತಿಯ ದಿನಕರ ಕೈಯೂರು, ಅಲಂಕಾರ ಸಮಿತಿಯ ಭುವನೇಶ್ ಆಚಾರ್ಯ, ವಸತಿ ಸಮಿತಿ ಸಂದೀಪ್ ಶೆಟ್ಟಿ, ಮಾತೃ ಸಮಿತಿಯ ಅಧ್ಯೆಕ್ಷೆ ಶ್ಯಾಮಲ ಪ್ರಭಾಕರ ಶೆಟ್ಟಿ ಶಿಬರೂರುಗುತ್ತು, ಸಂಚಾಲಕಿ ಸುಷ್ಮಾ ಯು. ಶೆಟ್ಟಿ ಶಿಬರೂರುಗುತ್ತು, ಅರ್ಥಿಕ ಸಮಿತಿ ಪ್ರವೀಣ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

.