ಸಾರಾಂಶ
ಕೋಮು ಪ್ರಚೋದನಾಕಾರಿಯಾಗಿ ಮಾತನಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.
ಉಪ್ಪಿನಂಗಡಿ: ಮುಸ್ಲಿಮ್ ಸಮುದಾಯದವರ ವಿರುದ್ಧ ಅವಹೇಳನಕಾರಿಯಾಗಿ ಮತ್ತು ಕೋಮು ಪ್ರಚೋದನಾಕಾರಿಯಾಗಿ ಮಾತನಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಮೇ ೩ರಂದು ರಾತ್ರಿ ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜಾ ಮುಸ್ಲಿಂ ಸಮುದಾಯದವರ ವಿರುದ್ಧ ದ್ವೇಷ ಭಾಷಣ ಮಾಡಿದ್ದರು ಎಂದು ಆರೋಪಿಸಲಾಗಿದೆ.ಶಾಸಕ ಹರೀಶ್ ಪೂಂಜಾ ಮಾಡಿದ ಈ ಪ್ರಚೋದನಾಕಾರಿ ಭಾಷಣದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಪ್ರಕರಣದ ಪ್ರತ್ಯಕ್ಷದರ್ಶಿಯೆಂದು ತೆಕ್ಕಾರು ನಿವಾಸಿ ಇಬ್ರಾಹೀಂ ಎಸ್.ಬಿ. ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಉಪ್ಪಿನಂಗಡಿ ಪೊಲೀಸರು ಶಾಸಕ ಹರೀಶ್ ಪೂಂಜಾ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದರ ತನಿಖೆ ನಡೆಸಲು ಪುತ್ತೂರು ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರಿಗೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶಿಸಿದ್ದರು. ಇದರ ತನಿಖೆ ನಡೆಸಿದ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್. ಹಾಗೂ ಅವರ ತಂಡ ಶಾಸಕ ಹರೀಶ್ ಪೂಂಜಾರ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದೆ.;Resize=(128,128))
;Resize=(128,128))
;Resize=(128,128))
;Resize=(128,128))