ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಕಾಂಗ್ರೆಸ್‌ನ ಚಾರ್ಲ್ಸ್‌ ಒತ್ತಾಯ

| Published : Jan 30 2024, 02:03 AM IST

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಕಾಂಗ್ರೆಸ್‌ನ ಚಾರ್ಲ್ಸ್‌ ಒತ್ತಾಯ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಸಚಿವ ಬಿ. ಶಿವರಾಂ ವಿರುದ್ಧ ಏಕವಚನದ ಪದ ಬಳಕೆ ಮಾಡಿರುವ ಜಿಲ್ಲಾ ಉಸ್ತುವಾರಿ ಮಂತ್ರಿ ಕೆ.ಎನ್. ರಾಜಣ್ಣ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬದಲಾವಣೆ ಮಾಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಮತ್ತು ಬಾಗೆ ಗ್ರಾಮ ಪಂಚಾಯಿತಿ ಸದಸ್ಯ ಚಾರ್ಲ್ಸ್ ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜಣ್ಣರಿಂದ ಲೋಕಸಭೆಯಲ್ಲಿ ಕಾಂಗ್ರೆಸ್‌ ಸೋಲು ಖಚಿತಕನ್ನಡಪ್ರಭ ವಾರ್ತೆ ಹಾಸನ

ಮಾಜಿ ಸಚಿವ ಬಿ. ಶಿವರಾಂ ವಿರುದ್ಧ ಏಕವಚನದ ಪದ ಬಳಕೆ ಮಾಡಿರುವ ಜಿಲ್ಲಾ ಉಸ್ತುವಾರಿ ಮಂತ್ರಿ ಕೆ.ಎನ್. ರಾಜಣ್ಣ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬದಲಾವಣೆ ಮಾಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಮತ್ತು ಬಾಗೆ ಗ್ರಾಮ ಪಂಚಾಯಿತಿ ಸದಸ್ಯ ಚಾರ್ಲ್ಸ್ ಒತ್ತಾಯಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಜಿಲ್ಲಾ ಉಸ್ತುವಾರಿ ಮತ್ತು ಸಹಕಾರ ಸಚಿವ ಕೆ. ಎನ್. ರಾಜಣ್ಣ ಹಾಸನ ಜಿಲ್ಲೆಗೆ ಗಣರಾಜ್ಯೋತ್ಸವ ದಿನದಂದು ಆಗಮಿಸಿದ್ದಾಗ ಮಾಜಿ ಸಚಿವ ಬಿ. ಶಿವರಾಮ್ ವಿರುದ್ಧ ಏಕವಚನದಲ್ಲಿ ಪದ ಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ರೀತಿಯಲ್ಲಿ ಮಾತನಾಡಿದ್ದರು. ಮಾಜಿ ಸಚಿವರು ಹಾಸನ ಜಿಲ್ಲಾ ಹಿರಿಯ ನಾಯಕ ಬಿ. ಶಿವರಾಮ್ ರವರ ಬಳಿ ಕ್ಷಮೆಯಾಚಿಸಬೇಕಾಗಿ ಮನವಿ ಮಾಡಿದ್ದರು. ಇದರ ವಿರುದ್ಧ ನಿಮ್ಮ ನಡವಳಿಕೆ ಬದಲಾವಣೆ ಮಾಡಿಕೊಳ್ಳದೆ ಹೋದಲ್ಲಿ ಜಿಲ್ಲಾದ್ಯಂತ ನಿಮ್ಮ ವಿರುದ್ಧ ಹೋರಾಟ ಮಾಡುವುದಾಗಿ ಶಿವರಾಮ್ ಅಭಿಮಾನಿಗಳು ಮತ್ತು ಜಿಲ್ಲಾ ಕಾಂಗ್ರೆಸ್ ನಾಯಕರು ಕೆಪಿಸಿಸಿ ಅಧ್ಯಕ್ಷರಿಗೆ ತಿಳಿಸಿದ್ದೇವೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ತುಮಕೂರಿಗೆ ಮಾತ್ರ ಸೀಮಿತವಾಗಿದ್ದಾರೆ. ಶಿವರಾಮ್ ಹಾಗೂ ಶಿವಲಿಂಗೇಗೌಡ ಅವರ ನಡುವಿನ ಗೊಂದಲ ಬಗೆಹರಿಸುವ ಬದಲು ಹಿರಿಯರಾದ ಶಿವರಾಮ್ ವಿರುದ್ಧ ಕ್ಷುಲ್ಲಕವಾಗಿ ಮಾತನಾಡಿರುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

ಜಿಲ್ಲೆಗೆ ಅತಿಥಿಯಂತೆ ಬಂದು ಹೋಗುವ ರಾಜಣ್ಣ ಅವರಿಂದ ಇಡಿ ಜಿಲ್ಲಾಡಳಿತ ಹದಗೆಟ್ಟಿದ್ದು, ಎಲ್ಲಾ ಇಲಾಖೆಗಳು ಭ್ರಷ್ಟಾಚಾರದ ಕೂಪವಾಗಿದ್ದು, ಜನಸಾಮಾನ್ಯರ ಹತ್ತಿರ ಹಣದ ಬೇಡಿಕೆ ಇಡುತ್ತಿದ್ದಾರೆ. ಸಚಿವ ರಾಜಣ್ಣರಿಂದ ಪಕ್ಷ ಸಂಘಟನೆ ಅಸಾಧ್ಯ. ಪಕ್ಷ ಅಧಿಕಾರಕ್ಕೆ ಬಂದು ಎಳು ಎಂಟು ತಿಂಗಳಾದರೂ ಒಂದೇ ಒಂದು ಕಾಯಕರ್ತರ ಸಭೆ ಕರೆಯದ ರಾಜಣ್ಣ ಅವರಿಂದ ಪಕ್ಷ ಸಂಘಟನೆ ಹೇಗೆ ಸಾಧ್ಯ. ಇವರು ಜಿಲ್ಲಾ ಉಸ್ತುವಾರಿ ಸಚಿವರು ಆದ ಮೇಲೆ ಜಿಲ್ಲಾ ಪಂಚಾಯಿತಿ ಅನುದಾನವನ್ನು ಬಿಟ್ಟು ಜಿಲ್ಲೆಗೆ ಗುರ್ತಿಸುವಂತ ಯಾವುದೇ ಅಭಿವೃದ್ಧಿ ಕೆಲಸಕ್ಕೆ ಇವತ್ತಿನವರೆಗೂ ಯಾವುದೇ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಕೂಡಲೇ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಬೇಕು. ಇವರ ನಾಯಕತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸಿದರೆ ಕಾಂಗ್ರೆಸ್ಸಿಗೆ ಸೋಲು ಖಚಿತ ಎಂದರು.

ಹಲಸುಲಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಗೌಡ, ಸಾಮಾಜಿಕ ಹೋರಾಟಗಾರ ಬಾಗೆಯ ರಾಜು ಇದ್ದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಾಗೆ ಗ್ರಾಪಂ ಸದಸ್ಯ ಚಾರ್ಲ್ಸ್.