ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಶ್ರವಣಬೆಳಗೊಳ ಜೈನ ಮಠದ ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ.ದೇವೇಗೌಡರವರ ರಾಜಕೀಯ ಜೀವನದ ಪ್ರತಿಯೊಂದು ಹಂತದಲ್ಲೂ ಬೆನ್ನೆಲುಬಾಗಿ ನಿಂತು, ಅವರ ಜನಸೇವೆಯ ಪಯಣದಲ್ಲಿ ಬೆಂಬಲವಾಗಿ ಸದಾ ಸಹಕಾರ ನೀಡಿದ ಚೆನ್ನಮ್ಮ ಅವರ ಪಾತ್ರ ಮಹತ್ವದ್ದಾಗಿದೆ. ಸರಳತೆ, ಸೌಜನ್ಯ, ಕುಟುಂಬ ಮೌಲ್ಯಗಳು ಹಾಗೂ ಸಮಾಜಮುಖಿ ಮನೋಭಾವದಿಂದ ಅವರು ಎಲ್ಲರ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದರು. ಎಚ್. ಡಿ. ದೇವೇಗೌಡರವರ ಸಾರ್ವಜನಿಕ ಬದುಕಿನ ಯಶಸ್ಸಿನ ಹಿಂದೆ ಅವರ ತ್ಯಾಗ, ಪ್ರೋತ್ಸಾಹ ಮತ್ತು ನಿಸ್ವಾರ್ಥ ಸಹಕಾರ ಮಹತ್ವದ ಪಾತ್ರ ವಹಿಸಿತ್ತು.
ದಿವಂಗತ ಚೆನ್ನಮ್ಮರವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರಿಗೆ, ಅವರ ಕುಟುಂಬದ ಸದಸ್ಯರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಕರುಣಿಸಲಿ ಎಂದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.