ಫೆಬ್ರವತಿ 19ಕ್ಕೆ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ

| Published : Feb 11 2024, 01:52 AM IST

ಫೆಬ್ರವತಿ 19ಕ್ಕೆ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ
Share this Article
  • FB
  • TW
  • Linkdin
  • Email

ಸಾರಾಂಶ

ಜಯಂತಿ ದಿನದಂದು ಎಲ್ಲ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

ಕೊಪ್ಪಳ: ಫೆ.19ರಂದು ಆಚರಿಸಲ್ಪಡುವ ಛತ್ರಪತಿ ಶಿವಾಜಿ ಮಹರಾಜ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ್ ಮಾಲಗಿತ್ತಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಿಸುವ ಕುರಿತಂತೆ ಚರ್ಚಿಸಲು ಉಪ ವಿಭಾಗಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಯಂತಿ ದಿನದಂದು ಎಲ್ಲ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಸಮಾಜದ ಮುಖಂಡರು ಮಾತನಾಡಿ, ಈ ಬಾರಿಯ ಛತ್ರಪತಿ ಶಿವಾಜಿ ಮಹಾರಾಜ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲಾಡಳಿತ ಭವನದಲ್ಲಿ ಪೂಜಾ ಕಾರ್ಯಕ್ರಮಕ್ಕೆ ಅನುಕೂಲ ಮಾಡಿಕೊಡಬೇಕು. ಜಯಂತಿ ದಿನದಂದು ನಗರದ ಶಿವಾಜಿ ಸರ್ಕಲ್ ಬಳಿ ಸಮಾಜದಿಂದ ನಡೆಯುವ ಪೂಜಾ ಕಾರ್ಯಕ್ರಮಕ್ಕೆ ಹಾಗೂ ಅಕ್ಕಮಹಾದೇವಿ ದೇವಸ್ಥಾನದಲ್ಲಿ ನಡೆಯುವ ಕೋಟೆ ರಸ್ತೆಯ ಪ್ರಸಾದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಈ ವೇಳೆ ಮಾತನಾಡಿದ ಎಸಿ, ಜಯಂತಿ ದಿನದಂದು ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ಹಾಗೂ ಅಕ್ಕಮಹಾದೇವಿ ಹತ್ತಿರ ಸ್ವಚ್ಛತೆಗೆ ನಗರಸಭೆಯಿಂದ ಸೂಕ್ತ ಕ್ರಮ ವಹಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಸಮಾಜದ ಮುಖಂಡರಾದ ನಾಗೇಶ ರಾವ್ ಬಡಿಗೇರ್, ಮಾರುತಿ ಕಾರಟಗಿ, ಚಂದ್ರಶೇಖರ್ ಬಡಿಗೇರ್, ಈಶಪ್ಪ ಅರಿಕೇರಿ, ಉಮೇಶ ಸುರ್ವೆ, ರಮೇಶ ಗೊರ್ಪಡೆ, ಬಸವರಾಜ ಕಂಪ್ಲಿ, ಮಾರುತಿ ಆಪ್ಟೆ ಸೇರಿದಂತೆ ಹಲವು ಗಣ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.