ಹಣಕಾಸಿನ ಹಂಚಿಕೆಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಮೋಸ: ಯು.ಟಿ. ಫರ್ಝಾನಾ

| Published : Oct 18 2024, 12:07 AM IST

ಸಾರಾಂಶ

14ನೇ ಹಣಕಾಸು ಆಯೋಗ ನಗದು ಹಂಚಿಕೆ ಮಾಡುವಾಗ ಅನುದಾನ ಶೇ 4.71 ರಿಂದ ಶೇ 3.74ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 5,495 ಕೋಟಿ ರು.ಗಳ ವಿಶೇಷ ಅನುದಾನ ನೀಡಲು ಶಿಫಾರಸು ಮಾಡಲಾಗಿತ್ತು. ಆದರೆ ಈ ವರೆಗೂ ಹಣ ಬಂದಿಲ್ಲ ಎಂದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಹಣಕಾಸು ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮೋಸ ಆಗಿದೆ. ಈ ಅನ್ಯಾಯದಿಂದಾಗಿ ರಾಜ್ಯ ಸರ್ಕಾರ ಹಣಕಾಸಿನ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ. ರಾಜ್ಯಕ್ಕೆ ನ್ಯಾಯದೊರಕಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನ ಲೋಕಸಭಾ ಸದಸ್ಯ ಜೊತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧ್ವನಿಗೂಡಿಸಬೇಕು. ಅದರಲ್ಲೂ ಕರ್ನಾಟಕದ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಆಸಕ್ತಿ ವಹಿಸಬೇಕು ಎಂದು ಕೆಪಿಸಿಸಿ ವಕ್ತಾರೆ ಯು.ಟಿ. ಫರ್ಝಾನಾ ಆಗ್ರಹಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡಿರುವ ‘ನಮ್ಮ ತೆರಿಗೆ ನಮ್ಮ ಹಕ್ಕು’ ಎಂಬ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದರು14ನೇ ಹಣಕಾಸು ಆಯೋಗ ನಗದು ಹಂಚಿಕೆ ಮಾಡುವಾಗ ಅನುದಾನ ಶೇ 4.71 ರಿಂದ ಶೇ 3.74ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು 5,495 ಕೋಟಿ ರು.ಗಳ ವಿಶೇಷ ಅನುದಾನ ನೀಡಲು ಶಿಫಾರಸು ಮಾಡಲಾಗಿತ್ತು. ಆದರೆ ಈ ವರೆಗೂ ಹಣ ಬಂದಿಲ್ಲ ಎಂದರು.

ಮಾಜಿ ಉಪ ಮೇಯರ್ ಕವಿತಾ ವಾಸು, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ, ಮಹಿಳಾ ಕಾಂಗ್ರೆಸ್‌ ಮಂಗಳೂರು ನಗರ ಬ್ಲಾಕ್ ಅಧ್ಯಕ್ಷೆ ರೂಪಾ ಚೇತನ್ ಪೂಜಾರಿ, ದಕ್ಷಿಣ ಬ್ಲಾಕ್‌ ಅಧ್ಯಕ್ಷೆ ಚಂದ್ರಕಲಾ ಜೋಗಿ ಇದ್ದರು.