ಇಂದಿರಾ ಕ್ಯಾಂಟೀನ್ ಆಹಾರ ಗುಣಮಟ್ಟ ಪರಿಶೀಲಿಸಿ

| Published : Dec 25 2024, 12:50 AM IST

ಸಾರಾಂಶ

Check Indira Canteen food quality

-ನಗರ ಬ್ಲಾಕ್ ಕಾಂಗ್ರೆಸ್ ಹಿಂ.ವ ವಿಭಾಗದಿಂದ ನಗರಸಭೆ ಪೌರಾಯುಕ್ತರಿಗೆ ಮನವಿ

-----

ಕನ್ನಡಪ್ರಭ ವಾರ್ತೆ ಭದ್ರಾವತಿ

ನಗರದಲ್ಲಿರುವ ಎರಡು ಇಂದಿರಾ ಕ್ಯಾಂಟೀನ್‌ಗಳ ಆಹಾರ ಗುಣಮಟ್ಟ ಪರಿಶೀಲನೆ ನಡೆಸುವ ಜೊತೆಗೆ ಹೊಸದಾಗಿ ಇಂದಿರಾ ಗಾಂಧಿಯವರ ಡಿಜಿಟಲ್ ಭಾವಚಿತ್ರ ಅಳವಡಿಸುವಂತೆ ಒತ್ತಾಯಿಸಿ ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್‌ಗೆ ಮನವಿ ಸಲ್ಲಿಸಲಾಯಿತು.

ನಗರದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿರುವ ಹಾಗೂ ಸಂತೆ ಮೈದಾನದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಳವಡಿಸಲಾಗಿರುವ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಭಾವಚಿತ್ರ ತುಂಬಾ ಹಳೇಯದಾಗಿದ್ದು, ಅಲ್ಲದೆ ಹಾಳಾಗಿದೆ. ಈ ಹಿನ್ನಲೆಯಲ್ಲಿ ಹೊಸದಾಗಿ ಡಿಜಿಟಲ್ ಭಾವಚಿತ್ರ ಅಳವಡಿಸಬೇಕು. ಕ್ಯಾಂಟೀನ್‌ನಲ್ಲಿ ಆಹಾರ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಕೋರಲಾಗಿದೆ.

ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಬಿ. ಗಂಗಾಧರ್, ಜಗದೀಶ್ ಬೋಸ್ಲೆ, ಹರೀಶ್ ಕುಮಾರ್, ಮಹಮದ್ ರಫಿ ಉಪಸ್ಥಿತರಿದ್ದರು.

----

ಫೋಟೋ: ಡಿ೨೪-ಬಿಡಿವಿಟಿ೨

ಭದ್ರಾವತಿ ನಗರದಲ್ಲಿರುವ ಎರಡು ಇಂದಿರಾ ಕ್ಯಾಂಟೀನ್‌ಗಳ ಆಹಾರ ಗುಣಮಟ್ಟ ಪರಿಶೀಲನೆ ನಡೆಸುವ ಜೊತೆಗೆ ಹೊಸದಾಗಿ ಇಂದಿರಾಗಾಂಧಿಯವರ ಡಿಜಿಟಲ್ ಭಾವಚಿತ್ರ ಅಳವಡಿಸುವಂತೆ ಒತ್ತಾಯಿಸಿ ನಗರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್‌ಗೆ ಮನವಿ ಸಲ್ಲಿಸಲಾಯಿತು.