ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನವನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಸಭೆ ಜರುಗಿತು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ, ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಸಭೆ ಜರುಗಿತು.ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿಗಳು ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳು ಇಲ್ಲದಂತೆ ಮತದಾರ ಪಟ್ಟಿಯನ್ನು ಪರಿಶೀಲಿಸಲು ತಿಳಿಸಿದರು. ಮತಗಟ್ಟೆ ಅಧಿಕಾರಿಗಳು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಅಚ್ಚುಕಟ್ಟಾಗಿ ಕಾರ್ಯವನ್ನು ನಿರ್ವಹಿಸಬೇಕು. ಮತದಾರರ ಮಟ್ಟಿಯಲ್ಲಿ ಮರಣ ಹೊಂದಿದವರ ವಿವರಗಳನ್ನು ಪರಿಶೀಲಿಸುವ ಕಾರ್ಯವಾಗಬೇಕು ಎಂದರು.
ಮತದಾರರ ಪಟ್ಟಿಯಲ್ಲಿ 85ಕ್ಕಿಂತ ಹೆಚ್ಚಿನ ಹಾಗೂ 100 ವಯಸ್ಸಿನ ಮತದಾರರನ್ನು ಪರಿಶೀಲಿಸುವುದರ ಜೊತೆಗೆ ಮತದಾರರ ಪಟ್ಟಿಯಲ್ಲಿ ಮತದಾರರ ವಿವರಗಳನ್ನು ಮ್ಯಾಪಿಂಗ್ ಮಾಡುವ ಕುರಿತು ಕ್ರಮವಹಿಸಲು ತಿಳಿಸಿದರು. ಮತಗಟ್ಟೆ ಮಟ್ಟದ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯ ಒಂದು ಅಂಗವಾಗಿರುವದರಿಂದ ಸದರಿ ಅಧಿಕಾರಿಗಳು ಚುನಾವಣೆಯಲ್ಲಿ ಮಹತ್ವದ ಕಾರ್ಯವನ್ನು ನಿರ್ವಹಿಸುತ್ತಿದ್ದು, ಚುನಾವಣೆಯು ಸುಗಮವಾಗಿ ಸಾಗಲು ತಮ್ಮ ಪಾತ್ರ ಸಹ ಮಹತ್ವವಾಗಿದೆ. ಯಾವುದೇ ರೀತಿಯಲ್ಲಿ ಲೋಪವಾಗದಂತೆ ಕ್ರಮವಹಿಸಲು ತಿಳಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ತಹಸೀಲ್ದಾರ ವಾಸುದೇವ ಸ್ವಾಮಿ. ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ್ ಕಿಲ್ಲೇದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚುನಾವಣಾ ವೆಚ್ಚದ ಕರಡು ದರಪಟ್ಟಿ ಪ್ರಕಟ: ಬಾಗಲಕೋಟೆ ವಿಧಾನ ಸಭಾ ಮತಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿದಂತೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚುವೆಚ್ಚಗಳ ಕರಡು ದರಪಟ್ಟಿ ಪ್ರಕಟಿಸುವ ಕುರಿತು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ವಿವಿಧ ರಾಜಕೀಯ ಮುಖಂಡರುಗಳ ಸಭೆ ಜರುಗಿತು.ಬರುವ ಉಪ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ವೆಚ್ಚಗಳ ಕರಡು ದರಪಟ್ಟಿ ಪ್ರಕಟಿಸಲಾಗಿದ್ದು, ದರಪಟ್ಟಿಯ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ವಾರದೊಳಗೆ ಸಲ್ಲಿಸಬಹುದಾಗಿದೆ. ಫೆ.1ರಂದು ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರಕ್ಕೆ ಸಂಬಂಧಿಸಿದ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತಿದ್ದು, ಅಂದು ಎಲ್ಲ ರಾಜಕೀಯ ಪಕ್ಷದ ಮುಖಂಡರು ಹಾಜರಾಗಿ ಮತದಾರರ ಪಟ್ಟಿ ಪಡೆದುಕೊಳ್ಳುವಂತೆ ಕೋರಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಸೀಲ್ದಾರ ವಾಸುದೇವ ಸ್ವಾಮಿ, ಚುನಾವಣಾ ವಿಭಾಗದ ಮಹೇಶ ಪಾಂಡವ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಶ್ರೀನಿವಾಸ ಬಳ್ಳಾರಿ, ನಾಗರಾಜ ಹದ್ಲಿ, ರಾಜು ಮನ್ನಿಕೇರಿ, ಶ್ರೀದರ ನೀಲನಾಯಕ, ಪ್ರಭು ಹಳ್ಳೂರ, ಕೃಷ್ಣಾ ಪಾಟೀಲ, ಪ್ರಭುರಾಜ ಪಾಟೀಲ, ಯಮನಪ್ಪ ಶಿರೂರ, ಬಸವರಾಜ ಹುನಗುಂದ, ಶ್ರೀಧರ ನಾಗರಬೆಟ್ಟ ಸೇರಿದಂತೆ ಇತರರು ಇದ್ದರು.