ಮಂಗಳೂರು: ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಪಡೆದರು.ಕದ್ರಿ ಕೈಬಟ್ಟಲ್, ಶಕ್ತಿನಗರದ ಕೋರ್ಡೆಲ್ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಬೋನುಗಳನ್ನು ಇಡಲಾಗಿದೆ. ಈ ಎರಡೂ ಭಾಗಗಳಲ್ಲಿ ಕಾಣಿಸಿಕೊಂಡ ಚಿರತೆ ಒಂದೇ ಆಗಿರುವ ಸಾಧ್ಯತೆಯೂ ಇದೆ. ಚಿರತೆ ಸಂಚಾರ ಮಾಡಿರುವ ಪ್ರದೇಶದಲ್ಲಿ ಹಗಲು ರಾತ್ರಿ ಗಸ್ತು ತಿರುಗಲು ಅರಣ್ಯ ಇಲಾಖೆ ಸಿಬ್ಬಂದಿಯ ತಂಡವನ್ನು ನಿಯೋಜಿಸಿದ್ದೇವೆ. ಸದ್ಯ ಚಿರತೆ ಇಲ್ಲೇ ಉಳಿದಿರದೆ ಕಾಡು ಪ್ರದೇಶಕ್ಕೆ ಮರಳಿರುವ ಬಗ್ಗೆ ಅಂದಾಜಿಸಲಾಗಿದೆ. ಹಾಗಿದ್ದೂ ಸಾರ್ವಜನಿಕರು ಚಿರತೆ ಸಹಿತ ಯಾವುದೇ ಅಪಾಯಕಾರಿ ಕಾಡುಪ್ರಾಣಿಗಳು ಕಂಡು ಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಟೋಲ್ ಫ್ರೀ ಸಂಖ್ಯೆ 1926 ಗೆ ಮಾಹಿತಿ ನೀಡಿ ಸಹಕರಿಸಿದರೆ ಇನ್ನಷ್ಟು ತ್ವರಿತ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ ಅವರು ಶಾಸಕರ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಕಾಡು ಪ್ರಾಣಿಗಳು ಆಹಾರ ಅರಸಿಕೊಂಡು ನಾಡಿಗೆ ಬರುತ್ತಿರುವುದು ಸೂಕ್ಷ್ಮ ವಿಚಾರವಾಗಿದ್ದು, ಸಾರ್ವಜನಿಕರ ಸುರಕ್ಷತೆಯ ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಶಾಸಕರು ಸೂಚನೆ ನೀಡಿದರು.----------
ಚಿರತೆ ಭೀತಿ ನಿವಾರಣೆ ಕ್ರಮಕ್ಕೆ ಶಾಸಕ ಕಾಮತ್ ಅಧಿಕಾರಿಗಳಿಗೆ ಸೂಚನೆ
ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.