ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ: ಪರವಾನಿಗೆ ರದ್ದು, ಕಾನೂನು ಕ್ರಮದ ಎಚ್ಚರಿಕೆ

| Published : Jul 17 2024, 12:46 AM IST

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ: ಪರವಾನಿಗೆ ರದ್ದು, ಕಾನೂನು ಕ್ರಮದ ಎಚ್ಚರಿಕೆ
Share this Article
  • FB
  • TW
  • Linkdin
  • Email

ಸಾರಾಂಶ

chemical manure price hike: strict action

ಚಿತ್ರದುರ್ಗ: ರಸಗೊಬ್ಬರ ಮಾರಾಟಗಾರರು ಗೊಬ್ಬರ ಚೀಲದ ಮೇಲೆ ಮುದ್ರಿತ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ಗೊಬ್ಬರ ಮಾರಾಟ ಮಾಡುತ್ತಿರುವ ಕುರಿತು ರೈತರಿಂದ ದೂರು ಕೇಳಿ ಬಂದಿವೆ. ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಪರವಾನಿಗೆ ರದ್ದು ಮಾಡಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ಕೃಷಿ ಜಂಟಿ ನಿರ್ದೇಶಕ ಬಿ.ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ರೈತರು ಮೆಕ್ಕೆಜೋಳ, ಸಾವೆ ಸೇರಿದಂತೆ ಇನ್ನಿತರ ಬೆಳೆಗಳಿಗೆ ಮೇಲು ಗೊಬ್ಬರವಾಗಿ ಯೂರಿಯಾ ಸೇರಿದಂತೆ ಹಲವು ರಸಗೊಬ್ಬರ ಉಪಯೋಗಿಸುತ್ತಾರೆ. ಈ ಸಮಯದಲ್ಲಿ ರಸಗೊಬ್ಬರದ ಕೃತಕ ಅಭಾವ ಸೃಷ್ಠಿಸುವುದು ಹಾಗೂ ರೈತರಿಂದ ಹೆಚ್ಚಿನ ಬೆಲೆ ಪಡೆಯುವುದು ಕಂಡು ಬಂದರೆ ಯಾವುದೇ ಮುಲಾಜೂ ಇಲ್ಲದೆ ಮಾರಾಟಗಾರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ರಸಗೊಬ್ಬರ ಮಾರಾಟಗಾರರು ದರ ಪಟ್ಟಿ ಮತ್ತು ದೈನಂದಿನ ದಾಸ್ತಾನು ವಿವರಗಳನ್ನು ಕಡ್ಡಾಯವಾಗಿ ಮಳಿಗೆಗಳ ಮುಂದೆ ಸಾರ್ವಜನಿಕರಿಗೆ ಗೋಚರವಾಗುವಂತೆ ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ್ ತಿಳಿಸಿದ್ದಾರೆ.

----