ಸಾರಾಂಶ
ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಕಾಡುತ್ತಿದ್ದರು. ಚೆನ್ನಮ್ಮ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನ ತ್ಯಾಗ ಮಾಡಿದಂತ ವೀರ ಮಹಿಳೆ
ಕುಷ್ಟಗಿ: ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿದಂತಹ ದೇಶದ ಮೊದಲ ಏಕೈಕ ಮಹಿಳೆಯಾಗಿದ್ದಾಳೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ತಾಲೂಕಾಡಳಿತದಿಂದ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ (ವಿಜಯೋತ್ಸವ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕಿತ್ತೂರು ರಾಣಿ ಚೆನ್ನಮ್ಮನವರ ಧೈರ್ಯ, ಹೋರಾಟದ ಛಲ ಆದರ್ಶವಾಗಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ಕಟ್ಟುವುದಕ್ಕೆ ಸಾಧ್ಯ ಎಂದು ಹೇಳಿದರು.
ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಕಾಡುತ್ತಿದ್ದರು. ಚೆನ್ನಮ್ಮ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನ ತ್ಯಾಗ ಮಾಡಿದಂತ ವೀರ ಮಹಿಳೆ ಎಂದರು.ಶಿಕ್ಷಕ ಡಾ. ಜೀವನಸಾಬ್ ವಾಲಿಕಾರ ಉಪನ್ಯಾಸ ನೀಡಿ, ಸ್ವಾತಂತ್ರ್ಯ ಹೋರಾಟಗಾರರಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರು ಬೆಳ್ಳಿಚುಕ್ಕಿಯಾಗಿ ಹೊರಹೊಮ್ಮಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷ್ ಸೈನ್ಯ ಎದುರಿಸಲು ತೋರಿದ ಧೈರ್ಯ ಮತ್ತು ಸಾಹಸ ಸ್ವಾತಂತ್ರ ಹೋರಾಟದ ಇತಿಹಾಸದಲ್ಲಿ ದೊಡ್ಡ ಮೈಲಿಗಲ್ಲು ಬ್ರಿಟಿಷರ ವಿರುದ್ಧ ಹೋರಾಡಿದ ಮೊಟ್ಟಮೊದಲ ರಾಣಿ ಕಿತ್ತೂರು ಚೆನ್ನಮ್ಮ, ಅವರ ಸ್ವಾಭಿಮಾನದ ಬದುಕು ನಮ್ಮೆಲ್ಲರಿಗೂ ಮಾದರಿ, ಕಿತ್ತೂರು ರಾಣಿ ಚೆನ್ನಮ್ಮ ಧೈರ್ಯ ಸ್ಥೆರ್ಯ ಎಲ್ಲರಿಗೂ ಮಾದರಿ, ಅವರಿಂದ ಸ್ಫೂರ್ತಿ ಪಡೆದು ಇಂದಿನ ಯುವಜನತೆ ದೇಶಕ್ಕೆ ಕೀರ್ತಿ ತರುವಂತಾಗಬೇಕು ಎಂದರು.ಮಾಜಿ ಜಿಪಂ ಸದಸ್ಯ ಕೆ.ಮಹೇಶ ಮಾತನಾಡಿ, ಕಿತ್ತೂರ ರಾಣಿ ಚೆನ್ನಮ್ಮನವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಂಡು ಬದುಕನ್ನು ನಡೆಸಬೇಕು ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ ಅಶೋಕ ಶಿಗ್ಗಾಂವಿ, ಸಿಪಿಐ ಯಶವಂತ ಬಿಸನಳ್ಳಿ, ಗ್ರೇಡ್ 2 ತಹಸೀಲ್ದಾರ ರಜನಿಕಾಂತ ಕೆಂಗೇರಿ, ದೇವೇಂದ್ರಪ್ಪ ಬಳೂಟಗಿ, ಶಿವಪ್ಪ ಗೆಜ್ಜಲಗಟ್ಟಿ, ಶಿವಸಂಗಪ್ಪ ಬಿಜಕಲ್, ಎಸ್.ಜಿ.ಪಾಟೀಲ, ದೊಡ್ಡನಗೌಡ ಎಸ್.ಪಾಟೀಲ, ನಾಗರಾಜ ಎಲಿಗಾರ ಸೇರಿದಂತೆ ತಹಸೀಲ್ದಾರ ಕಾರ್ಯಾಲಯದ ಸಿಬ್ಬಂದಿಗಳು ಹಾಗೂ ಪಂಚಮಸಾಲಿ ಸಮಾಜದವರು ಭಾಗವಹಿಸಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))