ಚೆಪ್ಪುಡಿರ, ಮೇಚಿಯಂಡ, ಬೊಟ್ಟೋಳಂಡ ತಂಡಗಳ ಗೆಲುವು

| Published : Apr 20 2025, 01:48 AM IST

ಸಾರಾಂಶ

ಮುದ್ದಂಡ ಹಾಕಿ ಕಪ್‌ನ ಶನಿವಾರ ನಡೆದ ಪಂದ್ಯದಲ್ಲಿ ಚೆಪ್ಪುಡಿರ, ಮೇಚಿಯಂಡ, ಬೊಟ್ಟೊಳಂಡ ತಂಡಗಳು ಗೆಲುವು ಸಾಧಿಸಿವೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮುದ್ದಂಡ ಹಾಕಿ ಕಪ್ ನ ಶನಿವಾರ ನಡೆದ ಪಂದ್ಯದಲ್ಲಿ ಚೆಪ್ಪುಡಿರ, ಮೇಚಿಯಂಡ, ಬೊಟ್ಟೋಳಂಡ ತಂಡಗಳು ಗೆಲುವು ಸಾಧಿಸಿವೆ.

ಚೆಪ್ಪುಡಿರ ಮತ್ತು ಕರ್ತಮಾಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ತಂಡ ಗೆಲುವು ಸಾಧಿಸಿತು. ಚೆಪ್ಪುಡಿರ ಪರ ವಚನ್ 2, ಚೇತನ್ ಚಿಣ್ಣಪ್ಪ ಹಾಗೂ ಸೋಮಣ್ಣ ತಲಾ 1 ಗೋಲು ದಾಖಲಿಸಿದರು.

ಮಾದಂಡ ಮತ್ತು ಮೇಚಿಯಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಮೇಚಿಯಂಡ ತಂಡ ಜಯ ಸಾಧಿಸಿತು. ಬೊಳ್ಳಂಡ ಮತ್ತು ಬೊಟ್ಟೋಳಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಬೊಟ್ಟೋಳಂಡ ಜಯ ಸಾಧಿಸಿತು.

ಕೊಂಗೇಟಿರ ಮತ್ತು ಚೇನಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 5-3 ಗೋಲುಗಳ ಅಂತರದಲ್ಲಿ ಕೊಂಗೇಟಿರ ಗೆಲುವು ಸಾಧಿಸಿತು.

ಐಚೆಟ್ಟೀರ ಮತ್ತು ನಾಳಿಯಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ನಾಳಿಯಂಡ ತಂಡ ಗೆಲುವು ಸಾಧಿಸಿತು.

ನೆಲ್ಲಮಕ್ಕಡ ಮತ್ತು ನಾಪಂಡ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ನೆಲ್ಲಮಕ್ಕಡ ತಂಡ ಜಯ ಸಾಧಿಸಿತು. ನೆಲ್ಲಮಕ್ಕಡ ಪರ ಪ್ರತಿಕ್ ಪೂವಣ್ಣ 2 ಹಾಗೂ ವೃಕ್ಷಿತ್ ಸೋಮಯ್ಯ 1 ಗೋಲು ದಾಖಲಿಸಿದರು. ನಾಪಂಡ ಪರ ಪ್ರವೀಣ 1 ಗೋಲು ದಾಖಲಿಸಿದರು. ನಾಪಂಡ ಪೊನ್ನಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಕೋಳೇರ ಮತ್ತು ಚೆಕ್ಕೇರ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಕೋಳೇರ ತಂಡ ಗೆಲುವು ಸಾಧಿಸಿತು.

ಪರದಂಡ ಮತ್ತು ಐನಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಪರದಂಡ ತಂಡ ಜಯ ಸಾಧಿಸಿತು.

ಬಯವಂಡ ಮತ್ತು ಕರವಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಕರವಂಡ ತಂಡ ಗೆಲುವು ದಾಖಲಿಸಿದರು.

ಕಳ್ಳಿಚಂಡ ಮತ್ತು ಕಂಬೀರಂಡ ನಡುವಿನ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಎರಡೂ ತಂಡಗಳು ತಲಾ 1 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 5-3 ಗೋಲುಗಳ ಅಂತರದಲ್ಲಿ ಕಂಬೀರಂಡ ಜಯ ಸಾಧಿಸಿತು.

ಕೋನೇರಿರ ಮತ್ತು ಇಟ್ಟೀರ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಇಟ್ಟೀರ ಗೆಲುವು ದಾಖಲಿಸಿತು.

ಕಾಂಡಂಡ ಮತ್ತು ಕುಲ್ಲೇಟಿರ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 4-3 ಗೋಲುಗಳ ಅಂತರದಲ್ಲಿ ಕಾಂಡಂಡ ಗೆಲುವು ದಾಖಲಿಸಿತು. ಕುಲ್ಲೇಟಿರ ಶುಭಂ ಚಿಟ್ಟಿಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಕುಪ್ಪಂಡ (ಕೈಕೇರಿ) ಮತ್ತು ಮತ್ರಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕುಪ್ಪಂಡ ತಂಡ ಜಯ ಸಾಧಿಸಿತು. ಕುಪ್ಪಂಡ ಪರ ಸೋಮಯ್ಯ 1 ಗೋಲು ದಾಖಲಿಸಿದರು. ಮತ್ರಂಡ ವಿಶಾಲ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.