ಸಾರಾಂಶ
ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಸಮಿತಿ ಸದಸ್ಯರ ಮಾಸಿಕ ಸಭೆ ನಡೆಯಿತು. ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅಧ್ಯಕ್ಷತೆ ವಹಿಸಿದ್ದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಸಮಿತಿ ಸದಸ್ಯರ ಮಾಸಿಕ ಸಭೆ ಮಂಗಳವಾರ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಕಾರುಗಂದ ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭ ಇತ್ತೀಚೆಗೆ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಅಸು ನೀಗಿದವರಿಗೆ ಮೌನ ಸಂತಾಪ ಸೂಚಿಸಲಾಯಿತು. ನಂತರ ಸಭೆಯಲ್ಲಿ ಮಹಿಳಾ ಒಕ್ಕೂಟದ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಕ್ರಿಯಾ ಯೋಜನೆ ರೂಪಿಸಿದ್ದು ಮುಂಬರುವ ದಿನಗಳಲ್ಲಿ ಒಕ್ಕೂಟದ ಸದಸ್ಯರು ಹಾಗೂ ಅವರ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುವುದಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಈ ಸಂದರ್ಭ ಸಮಿತಿ ಎಲ್ಲ ಪದಾಧಿಕಾರಿಗಳು ಹಾಜರಿದ್ದರು. ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ ಸ್ವಾಗತಿಸಿ ಕೊಡಪಾಲು ತೀರ್ಥ ಗಣಪತಿ ವಂದಿಸಿದರು.