ಚೇರಂಬಾಣೆ ಬೇಂಗ್ ನಾಡ್ ಕೊಡವ ಸಮಾಜದ ವತಿಯಿಂದ ಕೈಲ್ ಪೋದ್ ಒತ್ತೋರ್ಮೆ ಕೂಟ

ಮಡಿಕೇರಿ: ಚೇರಂಬಾಣೆ ಬೇಂಗ್ ನಾಡ್ ಕೊಡವ ಸಮಾಜದ ವತಿಯಿಂದ ಕೈಲ್ ಪೋದ್ ಒತ್ತೋರ್ಮೆ ಕೂಟ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯ ನಾಪಂಡ ಗಣೇಶ್ ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಉದ್ಘಾಟಿಸಿದರು. ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಬೆಂಗಳೂರಿನ ಉದ್ಯಮಿ ಹಾಗೂ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಅವರು ಕೊಡವ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉಳಿಸಿ ಬೆಳೆಸುವುದರ ಜೊತೆಗೆ ಮಕ್ಕಳಿಗೂ ಅವುಗಳನ್ನು ಕಲಿಸುವ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬೇಂಗ್ ನಾಡ್ ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ ಅವರು ಕೊಡವ ಸಮಾಜದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.ಫೆಡರೇಷನ್ ಆಫ್ ಕೊಡವ ಸಮಾಜದ ಕ್ರೀಡಾ ವಿಭಾಗದ ಸಂಚಾಲಕ ಕಂಬಿರಂಡ ಕಿಟ್ಟು ಅವರು ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ವೇದಿಕೆಯಲ್ಲಿ ಸಮಾಜದ ಉಪಾಧ್ಯಕ್ಷ ಪಟ್ಟಮಾಡ ಪೊನ್ನಪ್ಪ ಹಾಗೂ ಕಾರ್ಯದರ್ಶಿ ಕೇಕಡ ಮೊಣ್ಣಪ್ಪ ಉಪಸ್ಥಿತರಿದ್ದರು.ಪಟ್ಟಮಾಡ ವರುಣಿಕ ಪೊನ್ನಮ್ಮ ಪ್ರಾರ್ಥಿಸಿದರು. ಸಮಾಜದ ಕಾರ್ಯದರ್ಶಿ ಕೇಕಡ ರೋಮಿ ಮೊಣ್ಣಪ್ಪ ಸ್ವಾಗತಿಸಿದರು. ಜಂಟಿ ಕಾರ್ಯದರ್ಶಿ ಬಡ್ಡಿರ ನಳಿನಿ ಪೂವಯ್ಯ ಅತಿಥಿಗಳನ್ನು ಪರಿಚಯಿಸಿದರು. ತೇಲಪಂಡ ಲಕ್ಷ್ಮಿ ಪೆಮ್ಮಯ್ಯ ಕಾರ್ಯಕ್ರಮ ನಿರೂಪಿಸಿದರು. ಸಮಾಜದ ಖಜಾಂಚಿ ಬೋಪ್ಪಡತಂಡ ಕಿಶೋರ್ ವಂದಿಸಿದರು.