ಸಾರಾಂಶ
ನಾಪೋಕ್ಲು ಸಮೀಪದ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ 6 ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಗೆ ಫೆ.8 ರಂದು ಬೆಳಿಗ್ಗೆ 10 ಗಂಟೆಗೆ ಚಾಲನೆ ದೊರೆಯಲಿದ್ದು, ರಾಜಕೀಯ ವಲಯದ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ನಾಲ್ಕುನಾಡು ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಫೆ.8 ರಿಂದ 13ರ ವರೆಗೆ ನಾಪೋಕ್ಲು ಚೆರಿಯಪರಂಬುವಿನಲ್ಲಿ ಪ್ರಥಮ ವರ್ಷದ ಕೊಡಗು ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಕಪ್ ಪಂದ್ಯಾವಳಿ ನಡೆಯಲಿದೆ ಎಂದು ಅಸೋಸಿಯೇಷನ್ ಪದಾಧಿಕಾರಿ ಪರವಂಡ ಸಿರಾಜ್ ತಿಳಿಸಿದ್ದಾರೆ.ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಪೋಕ್ಲು ಸಮೀಪದ ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ 6 ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಗೆ ಫೆ.8 ರಂದು ಬೆಳಿಗ್ಗೆ 10 ಗಂಟೆಗೆ ಚಾಲನೆ ದೊರೆಯಲಿದ್ದು, ರಾಜಕೀಯ ವಲಯದ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಪಂದ್ಯಾವಳಿಯು ನಾಕೌಟ್ ಮಾದರಿಯಲ್ಲಿ ನಡೆಯಲಿದೆ. ಒಂದು ತಂಡದಲ್ಲಿ ಒಂದು ಜಮಾಅತ್ತಿಗೆ ಒಳಪಟ್ಟ ಕ್ರೀಡಾಪಟುಗಳಿಗೆ ಮಾತ್ರ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷ ಈ ನಿಯಮ ಮುಂದುವರೆಯಲಿದೆ ಎಂದು ಸಿರಾಜ್ ಹೇಳಿದರು.ಡಿ.11 ರಿಂದ ತಂಡದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಆಸಕ್ತ ತಂಡಗಳು ಜ.20ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ 9632975327, 9611554301ನ್ನು ಸಂಪರ್ಕಿಸಬಹುದಾಗಿದೆ ಎಂದರು.
ಫೆ.13ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಹಲವು ಗಣ್ಯವ್ಯಕ್ತಿಗಳು ಮತ್ತು ರಾಜಕೀಯ ನಾಯಕರು ಉಪಸ್ಥಿತರಿರುವರು ಎಂದರು.ಅಸೋಸಿಯೇಷನ್ ನ ಪದಾಧಿಕಾರಿಗಳಾದ ಎನ್.ಎ.ಶಬೀರ್, ಸಿ.ಎ.ನೌಫಲ್, ಬಿ.ಎಸ್.ರಿಜ್ವಾನ್, ಕೆ.ಎ.ರಶೀದ್ ಹಾಗೂ ಎಂ.ಯು.ರಫೀಕ್ ಇದ್ದರು.
;Resize=(128,128))
;Resize=(128,128))
;Resize=(128,128))