ಚೆರಿಯಪರಂಬು ಉರೂಸ್ ಗೆ ಚಾಲನೆ ನೀಡಲಾಯಿತು. ಚೆರಿಯಪರಂಬು ಮೊಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಎ. ಅಹಮದ್ ಧ್ವಜಾರೋಹಣ ನೆರವೇರಿಸಿದರು.

ಕನ್ನಡಪ್ರಭವಾರ್ತೆ ನಾಪೋಕ್ಲು

ಚೆರಿಯಪರಂಬು ಉರೂಸ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ಚೆರಿಯಪರಂಬು ಮೊಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಎ. ಅಹಮದ್ ಧ್ವಜಾರೋಹಣ ನೆರವೇರಿಸಿದರು.

ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಅಬ್ದುಲ್ ರಹ್ಮಾನ್ ವಲಿವುಲ್ಲಾಹಿ ಹಾಗೂ ಇತರ ಮಹಾನುಭಾವರ ವಾರ್ಷಿಕ ಉರುಸ್ ಸಮಾರಂಭಕ್ಕೆ ಆಗಮಿಸಿದ ಗಣ್ಯರು ಜುಮಾ ನಮಾಜಿನ ಬಳಿಕ ದಫ್ ಪ್ರದರ್ಶನದೊಂದಿಗೆ ದರ್ಗಾಗೆ ತೆರಳಿದರು. ಮಸೀದಿಯ ಖತೀಬರಾದ ಮುಹಮ್ಮದ್ ಶಫೀಕ್ ಅಲಿ ಸಿರಾಜಿ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಉರೂಸ್ ಸಮಾರಂಭವು 10ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು 9ರಂದು ಸಂಜೆ 4ಕ್ಕೆ ಮಸೀದಿಯಲ್ಲಿ ಮೌಲೂದ್ ಪಾರಾಯಣ ಹಾಗೂ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.

ಜಮಾಯತ್ ಪ್ರಧಾನ ಕಾರ್ಯದರ್ಶಿ ಪರವಂಡ ಸಿರಾಜ್, ಉಪಾಧ್ಯಕ್ಷ ಪಿ.ಎಂ. ಇಬ್ರಾಹಿಂ, ಕೋಶಾಧಿಕಾರಿ ಪಿ.ಎಚ್.ಬಶೀರ್, ಜಮಾಯತ್ ಆಡಳಿತ ಮಂಡಳಿ ಸದಸ್ಯರು, ಊರಿನ ಹಿರಿಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.