ಸಾರಾಂಶ
ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ನಗರದ ಗುರುಭವನದಲ್ಲಿ ಭಾನುವಾರ ಅಂತರ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಗೆ ಕ್ರೀಡಾಪಟುಗಳ ಸಂಘದ ಜಿಲ್ಲಾಧ್ಯಕ್ಷ ದಿನೇಶ ಕೆ. ಶೆಟ್ಟಿ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ, ದಾವಣಗೆರೆ ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ನಗರದ ಗುರುಭವನದಲ್ಲಿ ಭಾನುವಾರ ಅಂತರ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಗೆ ಕ್ರೀಡಾಪಟುಗಳ ಸಂಘದ ಜಿಲ್ಲಾಧ್ಯಕ್ಷ ದಿನೇಶ ಕೆ. ಶೆಟ್ಟಿ ಚಾಲನೆ ನೀಡಿದರು.
ಪಂದ್ಯಾವಳಿ ಉದ್ಘಾಟಿಸಿದ ದಿನೇಶ ಶೆಟ್ಟಿ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ ಚದುರಂಗ ಆಟದ ಹವ್ಯಾಸ ಬೆಳೆಸುವುದು ಬುದ್ಧಿಶಕ್ತಿ ಬೆಳವಣಿಗೆಗೆ ಸಹಕಾರಿ ಆಗುತ್ತದೆ. ಮಕ್ಕಳು ದೃಢನಿರ್ಧಾರ ತೆಗೆದುಕೊಳ್ಳುವಲ್ಲಿ ಪ್ರಬಲರಾಗುತ್ತಾರೆ. ಇಂತಹ ಆಟಗಳು ಹೆಚ್ಚಿನ ಮಕ್ಕಳಿಗೆ ಸಿಗುವಂತಾಗಲಿ ಎಂದರು.ರಾಷ್ಟ್ರ, ರಾಜ್ಯಮಟ್ಟದ ಸ್ಪರ್ಧೆಗಳಲ್ಲೂ ನಮ್ಮ ಜಿಲ್ಲೆಯ ಕ್ರೀಡಾಪಟುಗಳು ಹೆಸರು ಮಾಡಬೇಕು. ಮುಂದಿನ ದಿನಗಳಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ, ರಾಷ್ಟ್ರೀಯ ಪಂದ್ಯಾವಳಿಗಳು ನಡೆಯುವಂತಾಗಲಿ. ನಮ್ಮ ಪ್ರೋತ್ಸಾಹ ಸದಾ ಇರುತ್ತದೆ ಎಂದು ಹೇಳಿದರು.
ಪಾಲಿಕೆ ಮಾಜಿ ಸದಸ್ಯ ಡಿ.ಎನ್. ಜಗದೀಶ, ಅಂತಾರಾಷ್ಟ್ರೀಯ ಚೆಸ್ ತೀರ್ಪುಗಾರರಾದ ಪ್ರಾಣೇಶ ಯಾದವ್, ವಿಜಯಕುಮಾರ, ಆಯೋಜಕರಾದ ಯುವರಾಜ, ಮಂಜುಳಾ ಯುವರಾಜ್ ಇದ್ದರು.130ಕ್ಕೂ ಹೆಚ್ಚು ಸ್ಪರ್ಧಿಗಳು:
8,10 ,12, 14, 16, ವರ್ಷದೊಳಗಿನ ಮಕ್ಕಳಿಗೆ 80ಕ್ಕೂ ಹೆಚ್ಚು ವಿಶೇಷ ಬಹುಮಾನ ನೀಡಲಿದ್ದು, ಹಾಸನ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ, ಭದ್ರಾವತಿ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ 130ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. 7 ಸುತ್ತುಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಅನಂತರ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ ಎಂದು ಸಂಘದ ಆಯೋಜಕ ಯುವರಾಜ್ ತಿಳಿಸಿದ್ದಾರೆ.- - - -19ಕೆಡಿವಿಜಿ8:
ದಾವಣಗೆರೆಯಲ್ಲಿ ಅಂತರ ಜಿಲ್ಲಾಮಟ್ಟದ ಚೆಸ್ ಪಂದ್ಯಾವಳಿಯನ್ನು ಕ್ರೀಡಾಪಟುಗಳ ಸಂಘದ ಜಿಲ್ಲಾಧ್ಯಕ್ಷ ದಿನೇಶ ಕೆ. ಶೆಟ್ಟಿ ಉದ್ಘಾಟಿಸಿದರು.