ಮಾನಸಿಕ ಆರೋಗ್ಯ ಉತ್ತೇಜಿಸುವ ಚದುರಂಗ

| Published : Feb 02 2025, 11:46 PM IST

ಸಾರಾಂಶ

ಚೆಸ್ ಆಟವು ಏಕಾಗ್ರತೆ ಹೆಚ್ಚಿಸುವುದಲ್ಲದೆ, ಮಾನಸಿಕ ಆರೋಗ್ಯವನ್ನು ಉತ್ತೇಜಿಸುತ್ತದೆ.

ಸಂಡೂರು: ಚೆಸ್ ಆಟವು ಏಕಾಗ್ರತೆ ಹೆಚ್ಚಿಸುವುದಲ್ಲದೆ, ಮಾನಸಿಕ ಆರೋಗ್ಯವನ್ನು ಉತ್ತೇಜಿಸುತ್ತದೆ ಎಂದು ಜಿಪಂ ಮಾಜಿ ಸದಸ್ಯ ಲಕ್ಷ್ಮಣ ತಿಳಿಸಿದರು.

ತಾಲೂಕಿನ ವಿಠಲಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಜಯನಗರ-ಬಳ್ಳಾರಿ ಜಿಲ್ಲಾ ಮಟ್ಟದ 15 ವರ್ಷದೊಳಗಿನವರ ಚೆಸ್ ಟೂರ್ನಮೆಂಟ್ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಯರ‍್ರೆಪ್ಪ ಮಾತನಾಡಿ, ಚೆಸ್ ಆಟವು ವಿದ್ಯಾರ್ಥಿಗಳಲ್ಲಿ ಕೌಶಲ್ಯ, ಸೃಜನಶೀಲತೆ ಬೆಳೆಸಿ, ಮಿದುಳಿಗೆ ಕೆಲಸ ನೀಡಿ, ಅವರು ವಿಭಿನ್ನವಾಗಿ ಯೋಚಿಸಲು, ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು, ಉತ್ತಮ ಆಯ್ಕೆ ಮಾಡಿಕೊಳ್ಳಲು ಹಾಗೂ ಕ್ರೀಡಾ ಮನೋಭಾವವನ್ನು ಕಲಿಸಿಕೊಡುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಠಲಾಪುರ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಎಂ.ವೈ. ರಮೇಶ್ ಅವರು ಮಾತನಾಡಿದರು.

ಗಾದಿಲಿಂಗಪ್ಪ ಪ್ರಾರ್ಥಿಸಿದರು. ಕೆ.ತಿಪ್ಪೇಸ್ವಾಮಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಡಾ.ರಾಮಾಂಜಿನಿ ವಂದಿಸಿದರು. ಚೆಸ್ ಟೂರ್ನಮೆಂಟ್‌ನಲ್ಲಿ ಬಳ್ಳಾರಿ-ವಿಜಯನಗರ ಜಿಲ್ಲೆಗಳ ವಿವಿಧ ಶಾಲೆಗಳ 315 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸ್ಪರ್ಧೆಯ ಸಂಯೋಜಕ ನಾಗರಾಜ ವಿಠಲಾಪುರ, ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷ ವಿರುಪಾಕ್ಷಯ್ಯ, ತಾಲೂಕು ಘಟಕದ ಅಧ್ಯಕ್ಷ ಜಗದೀಶ, ಗ್ರಾಪಂ ಸದಸ್ಯ ಮಹಾಂತೇಶ, ಧನುಂಜಯ, ಬಾಂಡ್ರಪ್ಪ, ಮುಖಂಡರಾದ ಕೆ.ತಿಪ್ಪೇಸ್ವಾಮಿ, ಡಿ. ಉಮೇಶ ಇದ್ದರು.

ಸಂಡೂರು ತಾಲೂಕಿನ ವಿಠಲಾಪುರ ಗ್ರಾಮದಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ಬಳ್ಳಾರಿ-ವಿಜಯನಗರ ಜಿಲ್ಲಾ ಮಟ್ಟದ ಚೆಸ್ ಟೂರ್ನಮೆಂಟ್ ಅನ್ನು ಉದ್ಘಾಟಿಸಲಾಯಿತು.

ಸಂಡೂರು ತಾಲೂಕಿನ ವಿಠಲಾಪುರ ಸರ್ಕಾರಿ ಪಿಯು ಕಾಲೇಜಿನಲ್ಲಿ 15 ವರ್ಷದ ಒಳಗಿನವರ ಜಿಲ್ಲಾ ಮಟ್ಟದ ಚೆಸ್ ಟೂರ್ನಮೆಂಟ್‌ನಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.