ಹುಬ್ಬಳ್ಳಿ:
ಗುಣಮಟ್ಟದ ಶಿಕ್ಷಣ, ಅತ್ಯುತ್ತಮ ಶೈಕ್ಷಣಿಕ ಸಾಧನೆಗಳು, ಆಧುನಿಕ ಮೂಲಸೌಕರ್ಯ ಹಾಗೂ ಪ್ಲೇಸ್ಮೆಂಟ್ ವ್ಯವಸ್ಥೆಯ ಮೂಲಕ ಉತ್ತರ ಕರ್ನಾಟಕದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನ ಗಳಿಸಿರುವ ಚೇತನ ಸಮೂಹ ಸಂಸ್ಥೆಗಳು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪ್ರಮುಖ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿವೆ.ಮೂವತ್ತು ವರ್ಷಗಳ ಶೈಕ್ಷಣಿಕ ಪರಂಪರೆ ಹೊಂದಿರುವ ಈ ಸಂಸ್ಥೆಯು ಡಾ. ವಿಶ್ವನಾಥ ಕೊರವಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ನಿರಂತರವಾಗಿ ಬೆಳವಣಿಗೆ ಸಾಧಿಸಿದೆ. ಪಿಯುಸಿ ಕಾಮರ್ಸ್‌ನಿಂದ ಸ್ನಾತಕೋತ್ತರ ಶಿಕ್ಷಣದ ವರೆಗೆ ವಿದ್ಯಾರ್ಥಿಗಳಿಗೆ ಸಮಗ್ರ ಹಾಗೂ ಉದ್ಯೋಗಮುಖಿ ಶಿಕ್ಷಣ ಒದಗಿಸುತ್ತಿದೆ. PUC Commerce, B.Com, BBA, BCA, MBA ಮತ್ತು MCA ಕೋರ್ಸ್‌ಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ರ್‍ಯಾಂಕ್‌ಗಳ ಸುರಿಮಳೆ:
ಶೈಕ್ಷಣಿಕ ಸಾಧನೆಗಳ ವಿಷಯದಲ್ಲಿ ಸಂಸ್ಥೆಯು ನಿರಂತರವಾಗಿ ಉನ್ನತ ಮಟ್ಟದ ಫಲಿತಾಂಶ ದಾಖಲಿಸುತ್ತಿದೆ. ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಅನೇಕ ವಿಶ್ವವಿದ್ಯಾಲಯ ರ್‍ಯಾಂಕ್, ಚಿನ್ನದ ಪದಕ ಹಾಗೂ ಡಿಸ್ಟಿಂಕ್ಷನ್ ಗಳಿಸಿ ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾರೆ. ಪಿಯುಸಿ ಕಾಮರ್ಸ್ ವಿಭಾಗದಲ್ಲಿಯೂ ಶೇ.95ಕ್ಕಿಂತ ಅಧಿಕ ಫಲಿತಾಂಶ ದಾಖಲಿಸುವ ಮೂಲಕ ಸಂಸ್ಥೆ ರಾಜ್ಯಮಟ್ಟದಲ್ಲಿ ಗಮನ ಸೆಳೆದಿದೆ.ಇಲ್ಲಿನ ಶ್ರೀನಗರದಲ್ಲಿರುವ ಸುಸಜ್ಜಿತ ಕ್ಯಾಂಪಸ್‌ನಲ್ಲಿ ಸ್ಮಾರ್ಟ್‌ಕ್ಲಾಸ್ ರೂಂ, ಡಿಜಿಟಲ್ ಲರ್ನಿಂಗ್ ಸೌಲಭ್ಯ, ಸಮೃದ್ಧ ಗ್ರಂಥಾಲಯ, ಹೈ-ಸ್ಪೀಡ್ ಇಂಟರ್‌ನೆಟ್ ಹಾಗೂ 400ಕ್ಕೂ ಹೆಚ್ಚು ಕಂಪ್ಯೂಟರ್‌ಗಳನ್ನು ಒಳಗೊಂಡ ಆಧುನಿಕ ಪ್ರಯೋಗಾಲಯಗಳು ವಿದ್ಯಾರ್ಥಿಗಳ ಕಲಿಕೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುತ್ತಿವೆ. ಅನುಭವಿ ಮತ್ತು ಪಿಎಚ್.ಡಿ ಪದವೀಧರ ಬೋಧಕ ವೃಂದದ ಮಾರ್ಗದರ್ಶನ ಸಂಸ್ಥೆಯ ಮತ್ತೊಂದು ವಿಶೇಷತೆಯಾಗಿದೆ.
ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿರುವ ಸಂಸ್ಥೆಯು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಮಹತ್ವ ನೀಡುತ್ತಿದೆ. ಅತ್ಯಾಧುನಿಕ ಪಿಕಲ್ಬಾಲ್ ಕೋರ್ಟ್, ಬ್ಯಾಸ್ಕೆಟ್‌ಬಾಲ್ ಮೈದಾನ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ನಾಯಕತ್ವ ತರಬೇತಿಗಳ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಾತಾವರಣ ನಿರ್ಮಿಸಲಾಗಿದೆ. ಜತೆಗೆ ವಿವಿಧ ಭಾಗಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗಾಗಿ ಸಾರಿಗೆ ಸೌಲಭ್ಯ ಹಾಗೂ ವಿದ್ಯಾರ್ಥಿನಿಯರಿಗಾಗಿ ಸುರಕ್ಷಿತ ಮತ್ತು ಆಧುನಿಕ ವಸತಿನಿಲಯ ವ್ಯವಸ್ಥೆ ಕಲ್ಪಿಸಲಾಗಿದೆ.
ಪ್ರಬಲ ಪ್ಲೇಸ್ಮೆಂಟ್ ಸೆಲ್:
ಉದ್ಯೋಗಾವಕಾಶಗಳ ಸೃಷ್ಟಿಯಲ್ಲಿ ಸಂಸ್ಥೆಯ ಪ್ಲೇಸ್ಮೆಂಟ್ ಸೆಲ್ ಮಹತ್ವದ ಪಾತ್ರವಹಿಸುತ್ತಿದೆ. ವಿದ್ಯಾರ್ಥಿಗಳನ್ನು ಕಾರ್ಪೊರೇಟ್ ಜಗತ್ತಿಗೆ ಸಜ್ಜುಗೊಳಿಸಲಾಗುತ್ತಿದೆ. ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳು ವಾರ್ಷಿಕ ₹12 ಲಕ್ಷದ ವರೆಗೆ ಹಾಗೂ ಬಿಸಿಎ ವಿದ್ಯಾರ್ಥಿಗಳು ₹8 ಲಕ್ಷದ ವರೆಗೆ ವೇತನ ಪ್ಯಾಕೇಜುಗಳೊಂದಿಗೆ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು ಯಶಸ್ಸು ಸಾಧಿಸಿದ್ದಾರೆ.Infosys, TCS, Wipro, Mphasis, Genpact, ICICI Bank, Teleperformance ಹಾಗೂ Zepto ಸೇರಿದಂತೆ ಅನೇಕ ರಾಷ್ಟ್ರೀಯ ಮತ್ತು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು ಸೇವೆ ಸಲ್ಲಿಸುತ್ತಿದ್ದು, ಸಂಸ್ಥೆಯ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿಯೂ ಚೇತನ್ ಸಮೂಹ ಸಂಸ್ಥೆಗಳು ಗಮನಾರ್ಹ ಸಾಧನೆ ಮಾಡಿವೆ. ಚೇತನ್ ಬಿಸಿಎ ಕಾಲೇಜು GHRDC ಸಮೀಕ್ಷೆಯಲ್ಲಿ ದೇಶದ ಪ್ರಮುಖ BCA ಕಾಲೇಜುಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, MBA ಶಿಕ್ಷಣ ಕ್ಷೇತ್ರದಲ್ಲಿಯೂ ಹಲವು ಪ್ರಶಂಸೆ ಮತ್ತು ಮಾನ್ಯತೆಗಳನ್ನು ಗಳಿಸಿದೆ.ಜ್ಞಾನ, ಕೌಶಲ್ಯ ಮತ್ತು ಯಶಸ್ಸು ಎಂಬ ಧ್ಯೇಯವಾಕ್ಯದೊಂದಿಗೆ ಗುಣಮಟ್ಟದ ಶಿಕ್ಷಣ ಹಾಗೂ ಮೌಲ್ಯಾಧಾರಿತ ತರಬೇತಿ ನೀಡುತ್ತಿರುವ ಚೇತನ್ ಸಮೂಹ ಸಂಸ್ಥೆಗಳು, ಉತ್ತರ ಕರ್ನಾಟಕದ ವಿದ್ಯಾರ್ಥಿಗಳ ಮೊದಲ ಆಯ್ಕೆಯ ಶಿಕ್ಷಣ ಸಂಸ್ಥೆಯಾಗಿ ಬೆಳೆಯುತ್ತಿದ್ದು, ಭವಿಷ್ಯದ ನಾಯಕರನ್ನು ರೂಪಿಸುವ ಮಹತ್ವದ ಕಾರ್ಯವನ್ನು ಯಶಸ್ವಿಯಾಗಿ ಮುಂದುವರಿಸುತ್ತಿವೆ.
ಫೋಟೋ-ಡಾ.ವಿಶ್ವನಾಥ್ ಕೊರವಿ-
ಚೇತನ ಕಾಲೇಜ್