ನಗರದ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಮಂಗಳೂರು ವಿವಿ ಸಹಯೋಗದಲ್ಲಿ ನಡೆದ ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯ ವಿಶೇಷ ಮಕ್ಕಳು ಸಮಗ್ರ ಚಾಂಪಿಯನ್‌ಶಿಪ್ ಗೆದ್ದುಕೊಂಡಿದ್ದಾರೆ.

ಉಡುಪಿ: ನಗರದ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಮಂಗಳೂರು ವಿವಿ ಸಹಯೋಗದಲ್ಲಿ ನಡೆದ ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಯ ವಿಶೇಷ ಮಕ್ಕಳು ಸಮಗ್ರ ಚಾಂಪಿಯನ್‌ಶಿಪ್ ಗೆದ್ದುಕೊಂಡಿದ್ದಾರೆ. ಉಡುಪಿ ಜಿಲ್ಲೆಯ 16 ವಿಶೇಷ ಶಾಲೆಗಳ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಆರಂಭದಲ್ಲಿ ನಡೆದ ಪಥಸಂಚಲನದಲ್ಲಿ ವಿಜೇತ ವಿಶೇಷ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗೆದ್ದುಕೊಂಡರು.

ನಂತರ ವಿಜೇತ ಶಾಲೆಯಿಂದ ಒಟ್ಟು 45 ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ 22 ಚಿನ್ನ, 17 ಬೆಳ್ಳಿ ಹಾಗೂ 20 ಕಂಚಿನ ಪದಕಗಳನ್ನು ಗೆದ್ದು ಸಮಗ್ರ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದುಕೊಂಡರು.

ತೆಂಕನಿಡಿಯೂರು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾವಂಕರ್, ಕ್ರೀಡಾ ಮತ್ತು ಯುವಜನಾ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ನಿರ್ದೇಶಕ ಡಾ. ರೋಶನ್ ಶೆಟ್ಟಿ, ಉಡುಪಿ ಜಿಲ್ಲಾ ಪಾಲಕರ ಸಂಘದ ಅಧ್ಯಕ್ಷ ಜೈ ವಿಠ್ಠಲ್, ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕ-ಶಿಕ್ಷಕೇತರ ಸಂಘದ ಗೌರವಾಧ್ಯಕ್ಷೆ ಆಗ್ನೆಸ್ ಕುಂದರ್, ಕಾರ್ಯಧ್ಯಕ್ಷೆ ಡಾ. ಕಾಂತಿ ಹರೀಶ್, ಜಿಲ್ಲಾ ಅಧ್ಯಕ್ಷ ರವೀಂದ್ರ ಎಚ್. ಹಾಗೂ ಕಾರ್ಯಾದರ್ಶಿ ಶಶಿಕಲಾ ಕೋಟ್ಯಾನ್ ಉಪಸ್ಥಿತರಿದ್ದರು.