ಸಾರಾಂಶ
ಚಿತ್ರದುರ್ಗ: ಗುಲ್ಬರ್ಗದ ಚಿತ್ತಾಪುರದಲ್ಲಿ ನಡೆದ ತಿರಂಗಾಯಾತ್ರೆ ಸಂದರ್ಭದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಕಾರಿಗೆ ಮಸಿ ಬಳಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಚಿತ್ರದುರ್ಗದ ಕಾಂಗ್ರೆಸ್ ಕಚೇರಿ ನುಗ್ಗಲು ಯತ್ನಿಸಿದ ಛಲವಾದಿ ಸಮಾಜದ ಮುಖಂಡ ತಿಪ್ಪೇಸ್ವಾಮಿ ಅವರನ್ನು ಶನಿವಾರ ಪೊಲೀಸರು ಬಂಧಿಸಿದರು.ನಾರಾಯಣಸ್ವಾಮಿ ಅವರ ಮೇಲಿನ ಹಲ್ಲೆ ಖಂಡಿಸಿ ಒನಕೆ ಓಬವ್ವ ಪ್ರತಿಮೆ ಮುಂಭಾಗ ಛಲವಾದಿ ಸಮಾಜದಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ನೂರಾರು ಮಂದಿ ಕುಳಿತುಕೊಳ್ಳುವಷ್ಟು ವೇದಿಕೆ ನಿರ್ಮಿಸಲಾಗಿತ್ತು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ಆಕ್ರೋಶ ಮಳೆಗರೆದ ಮುಖಂಡ ತಿಪ್ಪೇಸ್ವಾಮಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದರು.ಪೊಲೀಸರು ಬಂಧಿಸಿ ಬಡಾವಣೆ ಠಾಣೆಗೆ ಕರೆದೊಯ್ದು ನಂತರ ಬಿಡುಗಡೆಗೊಳಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಛಲವಾದಿ ತಿಪ್ಪೇಸ್ವಾಮಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಿದೆ. ಜವಾಬ್ದಾರಿ ಸ್ಥಾನದಲ್ಲಿರುವ ಛಲವಾದಿ ನಾರಾಯಣಸ್ವಾಮಿ ಅವರನ್ನೇ ಈ ರೀತಿ ಕೇವಲವಾಗಿ ನಡೆಸಿಕೊಂಡರೆ ಇನ್ನು ಜನಸಾಮಾನ್ಯರ ಪಾಡೇನು? ಸಚಿವ ಪ್ರಿಯಾಂಕ್ ಖರ್ಗೆ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
;Resize=(128,128))
;Resize=(128,128))
;Resize=(128,128))