ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ :ಜಿ.ಆರ್.ಸಂತೋಷ್

| Published : Feb 20 2025, 12:46 AM IST

ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ :ಜಿ.ಆರ್.ಸಂತೋಷ್
Share this Article
  • FB
  • TW
  • Linkdin
  • Email

ಸಾರಾಂಶ

.ಛತ್ರಪತಿ ಶಿವಾಜಿಯ ಶೌರ್ಯ, ಸಾಹಸ, ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣೆಯಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತಹದ್ದಾಗಿದೆ. ಯುವಕರು ಅವರ ಶೌರ್ಯ, ಧೈರ್ಯ, ಸಾಹಸವನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಛತ್ರಪತಿ ಶಿವಾಜಿಯು ಅತ್ಯಂತ ಧೈರ್ಯಶಾಲಿ ಸಾಮ್ರಾಟನಾಗಿದ್ದು, ಭಾರತದಾದ್ಯಂತ ಮರಾಠ ಸಾಮ್ರಾಜ್ಯವನ್ನು ಸ್ಥಾಪಿಸಿ, ವಿಸ್ತರಿಸಿದ ಕೀರ್ತಿ ಇವರದ್ದು.

ಕನ್ನಡಪ್ರಭ ವಾರ್ತೆ ವಿಜಯಪುರ ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು. ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮ ಭಾರತವನ್ನು ತಮ್ಮ ಆಳ್ವಿಕೆಗೆ ತಂದರು ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಆರ್.ಸಂತೋಷ್ ಹೇಳಿದರು.ವಿಜಯಪುರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ಛತ್ರಪತಿ ಶಿವಾಜಿಯ ಶೌರ್ಯ, ಸಾಹಸ, ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣೆಯಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತಹದ್ದಾಗಿದೆ. ಯುವಕರು ಅವರ ಶೌರ್ಯ, ಧೈರ್ಯ, ಸಾಹಸವನ್ನು ಮೈಗೂಡಿಸಿಕೊಳ್ಳಬೇಕು ಎಂದರು. ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಛತ್ರಪತಿ ಶಿವಾಜಿಯು ಅತ್ಯಂತ ಧೈರ್ಯಶಾಲಿ ಸಾಮ್ರಾಟನಾಗಿದ್ದು, ಭಾರತದಾದ್ಯಂತ ಮರಾಠ ಸಾಮ್ರಾಜ್ಯವನ್ನು ಸ್ಥಾಪಿಸಿ, ವಿಸ್ತರಿಸಿದ ಕೀರ್ತಿ ಇವರದ್ದು. ಶಿವಾಜಿ ಅವರು ತಮ್ಮ ಜೀವಿತಾವಧಿಯಲ್ಲಿ ತನ್ನ ಸಾಮ್ರಾಜ್ಯವನ್ನು ಮೊಘಲರಿಂದ ಕಾಪಾಡಿಕೊಳ್ಳಲು ಅನೇಕ ವರ್ಷಗಳ ಕಾಲ ಹೋರಾಡಿದ್ದರು. ಇನ್ನು ಕೆಲವರು ಛತ್ರಪತಿ ಶಿವಾಜಿಯನ್ನು ದೇವರೆಂದೇ ಪರಿಗಣಿಸುತ್ತಾರೆ. ದಕ್ಕಿಣ ಭಾರತದಲ್ಲಿ ಇಂದಿಗೂ ಕೂಡ ಪ್ರಾಚೀನ ಹಿಂದೂ ದೇವಾಲಯಗಳು ಅಳಿಯದೇ ಉಳಿದಿವೆಯೆಂದರೆ ಅದಕ್ಕೆ ಮುಖ್ಯ ಕಾರಣ ಛತ್ರಪತಿ ಶಿವಾಜಿಯ ನ್ಯಾಯಯುತ ಆಡಳಿತವಾಗಿದೆ ಎಂದರು.ಬಿಜೆಪಿ ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಕನಕರಾಜು ಮಾತನಾಡಿ, ಹಿಂದೂ ಧರ್ಮದಲ್ಲಿ ಶಿವಾಜಿ ಮಹಾರಾಜರನ್ನು ದೇವರೆಂದು ಪರಿಗಣಿಸಲಾಗುತ್ತದೆ. ಶಿವಾಜಿ ಮಹಾರಾಜರು ಧರ್ಮಕ್ಕೆ ನೀಡಿದ ಕೊಡುಗೆ ಅಪಾರವಾದದ್ದು, ಭಾರತದಲ್ಲೇ ಅತ್ಯಂತ ಧೈರ್ಯಶಾಲಿ ಪುರುಷರು, ತಮ್ಮ ತಾಯಿನಾಡು ಮತ್ತು ಸ್ವರಾಜ್ಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ತ್ಯಜಿಸಿದ್ದಾರೆ ಎಂದರು.ಉಪನ್ಯಾಸಕ ಲಕ್ಷ್ಮಣ್ ಮಾತನಾಡಿ, ತಮ್ಮ ೧೨ನೇ ವಯಸ್ಸಿನವರೆಗೆ ಬೆಂಗಳೂರಿನಲ್ಲೇ ವಾಸವಿದ್ದ ಶಿವಾಜಿಗೆ ಆರಂಭಿಕ ಶಿಕ್ಷಣವನ್ನು ಕೊಟ್ಟವರು ಅಣ್ಣ ಸಂಬಾಜಿ. ನಂತರ ಶಿವನೇರಿ ದುರ್ಗಕ್ಕೆ ಹಿಂತಿರುಗಿದ ಶಿವಾಜಿಗೆ ಪೂರ್ಣಪ್ರಮಾಣದ ಯುದ್ಧ ಕೌಶಲ್ಯವನ್ನು ಧಾರೆ ಎರೆದವರು ದಾದಾಜಿ ಕೊಂಡದೇವ. ಕತ್ತಿವರಸೆ, ಕುದುರೆ ಸವಾರಿ, ಯುದ್ಧಕಲೆಗಳನ್ನು ಕರಗತ ಮಾಡಿಕೊಂಡ ಶಿವಾಜಿ ಅವರು ೧೭ನೇ ವಯಸ್ಸಿಗೆ ತೋರಣದುರ್ಗ ವಶಪಡಿಸಿಕೊಂಡು ಮಹತ್ವಾಕಾಂಕ್ಷೆಯ ಹೆಜ್ಜೆಗಳನ್ನು ಇಡಲು ಆರಂಭಿಸಿದ್ದರು. ಎಳೆಯ ವಯಸ್ಸಿನಿಂದಲೇ ತಾಯಿ ಜೀಜಾಬಾಯಿ ಅವರಿಂದ ಜೀವನ ಮೌಲ್ಯಗಳ ಶಿಕ್ಷಣ ಪಡೆದಿದ್ದ ಶಿವಾಜಿ ಸಂತ ರಾಮದಾಸರ ಪರಮಭಕ್ತರಾಗಿದ್ದರು ಎಂದರು. ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಹೂವಿನ ಅಲಂಕಾರ ಮಾಡಿ, ಪೂಜೆ ಸಲ್ಲಿಸಲಾಯಿತು. ಅಂಕತಟ್ಟಿ ನಂಜುಂಡಪ್ಪ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಲಾಯಿತು.ಪುರಸಭೆ ಕಂದಾಯ ಅಧಿಕಾರಿ ಚಂದ್ರು, ಪುರಸಭೆ ಸದಸ್ಯರಾದ ಶಿಲ್ಪಾ ಅಜಿತ್, ಸೈಯದ್ ಇಕ್ಭಾಲ್, ಸಿ.ಎಂ.ರಾಮು, ಶ್ರೀರಾಮಪ್ಪ, ಎಂ.ರಾಜಣ್ಣ, ಬಜರಂಗದಳ ಜಿಲ್ಲಾ ಸಂಚಾಲಕ ವಿ.ಕೃಷ್ಣಮೂರ್ತಿ, ವಿಶ್ವ ಹಿಂದೂ ಪರಿಷತ್ ಮುಖಂಡ ಮುನೀಂದ್ರ, ಬಿಜೆಪಿ ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಕನಕರಾಜು, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಕರವೇ ಮುಖಂಡ ಮಹೇಶ್ ಕುಮಾರ್, ವಿಶ್ವನಾಥ್ ಮಾಮ, ಆರ್.ಎಸ್.ಎಸ್. ಮುಖಂಡ ಲೋಕೇಶ್, ಜೆ.ಆರ್.ಮುನಿವೀರಣ್ಣ, ಡಿ.ಎಂ.ಮುನೀಂದ್ರ, ರವಿಕುಮಾರ್, ಜಯರಾಮ್, ಶಿವನಾಗೇಗೌಡ, ಲಿಂಗಣ್ಣ, ಅನಿಲ್, ಪೂರ್ಣಿಮಾ, ಪಾಂಡು, ರಾಮುಭಗವಾನ್, ಬೆಳ್ಳಿ ಮಹೇಶ್, ಚಂದನ್, ಮತ್ತು ಅನೇಕ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಪುರಸಭೆ ಸಿಬ್ಬಂದಿ ಹಾಜರಿದ್ದರು.